ಭೀಕರ ಅಪಘಾತ: ಯೂಟರ್ನ್ ವೇಳೆ ಗೂಡ್ಸ್ ವಾಹನ ಪಲ್ಟಿ, ಕಬ್ಬಿಣದ ಸರಳು ಬಿದ್ದು ಬೈಕ್ ಸವಾರ ದಾರುಣ ಸಾವು, Video
ಅತಿಯಾದ ಭಾರ ಹೊತ್ತು ಸಾಗುತ್ತಿದ್ದ ವಾಹನ ಪಲ್ಟಿಯಾಗಿ, ಅದರಲ್ಲಿದ್ದ ಕಬ್ಬಿಣದ ಪೈಪ್ಗಳು ಸ್ಕೂಟರ್ ಸವಾರನ ಮೇಲೆ ಬಿದ್ದ ಪರಿಣಾಮ 56 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೈದರಾಬಾದ್: ಯೂಟರ್ನ್ ವೇಳೆ ಗೂಡ್ಸ್ ವಾಹನ ಪಲ್ಟಿಯಾಗಿ ಅದರ ಮೇಲಿದ್ದ ಕಬ್ಬಿಣದ ಸರಳುಗಳು ಬೈಕ್ ಸವಾರನ ಮೇಲೆ ಬಿದ್ದು ಆತ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೈದರಾಬಾದ್ ನ ಬಾಲಾನಗರದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಅತಿಯಾದ ಭಾರ ಹೊತ್ತು ಸಾಗುತ್ತಿದ್ದ ವಾಹನ ಪಲ್ಟಿಯಾಗಿ, ಅದರಲ್ಲಿದ್ದ ಕಬ್ಬಿಣದ ಪೈಪ್ಗಳು ಸ್ಕೂಟರ್ ಸವಾರನ ಮೇಲೆ ಬಿದ್ದ ಪರಿಣಾಮ 56 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪೊಲೀಸರ ಪ್ರಕಾರ, ಕಬ್ಬಿಣದ ಪೈಪ್ಗಳ ಭಾರೀ ಕಟ್ಟುಗಳನ್ನು ಸಾಗಿಸುತ್ತಿದ್ದ ವಾಹನದಲ್ಲಿ ಅವುಗಳನ್ನು ಸಮರ್ಪಕವಾಗಿ ಭದ್ರಪಡಿಸಿರಲಿಲ್ಲ ಎನ್ನಲಾಗಿದೆ.
ಅಲ್ಲದೆ, ವಾಹನದ ಸುರಕ್ಷಿತ ಹೊರೆ ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರವನ್ನು ಸಾಗಿಸಲಾಗುತ್ತಿತ್ತು ಎಂದು ಶಂಕಿಸಲಾಗಿದೆ.
ಯೂಟರ್ನ್ ವೇಳೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ
ಚಾಲಕ ಯೂಟರ್ನ್ ತೆಗೆದುಕೊಳ್ಳುವಾಗ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ವಾಹನ ಎಡಭಾಗಕ್ಕೆ ಪಲ್ಟಿಯಾಗಿದೆ. ಇದೇ ಸಂದರ್ಭದಲ್ಲಿ ಪ್ರಕಾಶ್ ಪವಾರ್ ತಮ್ಮ ಸ್ಕೂಟರ್ನಲ್ಲಿ ವಾಹನದ ಪಕ್ಕದಲ್ಲೇ ನಿಧಾನವಾಗಿ ಸಾಗುತ್ತಿದ್ದರು.
ವಾಹನ ಪಲ್ಟಿಯಾಗುತ್ತಿದ್ದಂತೆ ಅದರಲ್ಲಿದ್ದ ಕಬ್ಬಿಣದ ಪೈಪ್ಗಳ ಕಟ್ಟು ನೇರವಾಗಿ ಪ್ರಕಾಶ್ ಅವರ ಮೇಲೆ ಬಿದ್ದಿದೆ. ಭಾರೀ ಪೈಪ್ಗಳಡಿ ಸಿಲುಕಿದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಿಸಿಟಿವಿಯಲ್ಲಿ ಸೆರೆಯಾದ ಭೀಕರ ದೃಶ್ಯ
ಅಪಘಾತದ ಸಂಪೂರ್ಣ ಘಟನೆ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಕಾಶ್ ಪವಾರ್ ನಿಧಾನವಾಗಿ ಸ್ಕೂಟರ್ ಚಲಾಯಿಸುತ್ತಾ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ವಾಹನದ ಪಕ್ಕಕ್ಕೆ ಬರುತ್ತಿರುವುದು ಕಂಡುಬಂದಿದೆ.
ವಾಹನ ವೇಗವಾಗಿ ತಿರುವು ತೆಗೆದುಕೊಳ್ಳುವ ವೇಳೆ ಸಮತೋಲನ ಕಳೆದುಕೊಂಡು ಪಲ್ಟಿಯಾಗಿದೆ. ಇದೇ ಸಂದರ್ಭದಲ್ಲಿ ವಾಹನದಲ್ಲಿದ್ದ ಪೈಪ್ಗಳು ಪಕ್ಕದಲ್ಲೇ ಚಲಿಸುತ್ತಿದ್ದ ಸ್ಕೂಟರ್ ಸವಾರನ ಮೇಲೆ ಬಿದ್ದ ಪರಿಣಾಮ ದುರಂತ ಸಂಭವಿಸಿದೆ.
ಪೊಲೀಸರಿಂದ ತನಿಖೆ
ಘಟನೆಗೆ ಸಂಬಂಧಿಸಿದಂತೆ ಬಾಲಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಾಹನದಲ್ಲಿ ಅತಿಯಾದ ಭಾರವನ್ನು ಸಾಗಿಸಲಾಗುತ್ತಿತ್ತೇ, ಕಬ್ಬಿಣದ ಪೈಪ್ಗಳನ್ನು ಸುರಕ್ಷಿತವಾಗಿ ಕಟ್ಟಲಾಗಿತ್ತೇ ಹಾಗೂ ಅಪಘಾತಕ್ಕೆ ಕಾರಣವಾದ ಅಂಶಗಳೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



