ದೇಶ

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'ಯಾವುದೇ ಕಾರಣಕ್ಕೂ SIR ಪ್ರಕ್ರಿಯೆ ನಿಲ್ಲುವುದಿಲ್ಲ, ಅಂತೆಯೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕೂಡ ತಮ್ಮ ಸ್ಥಾನದಿಂದ ಕೆಳಗಿಳಿಯುವುದಿಲ್ಲ' ಎಂದು ಹೇಳಿದ್ದಾರೆ.

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ
ದೆಹಲಿ ಪ್ರತಿಭಟನೆ
Published On :

ನವದೆಹಲಿ: ದೇಶಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆದಿರುವಂತೆಯೇ ಇತ್ತ ಹಿರಿಯ ಪತ್ರಕರ್ತರೊಬ್ಬರು ಇದಕ್ಕೆ ತದ್ವಿರುದ್ಧ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ಇಂದು ನಡೆಯಬೇಕಿದ್ದ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದೇ ಸಿಜೆಪಿ, ಎಎಪಿ ಸೇರಿದಂತೆ ಎಲ್ಲಾ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ಈ ಎಲ್ಲ ಘಟನೆಗಳ ಕುರಿತು ಮಾತನಾಡಿರುವ ಹಿರಿಯ ಪತ್ರಕರ್ತ ಭೂಪೇಂದ್ರ ಚೌಬೆ, 'ಯಾವುದೇ ಕಾರಣಕ್ಕೂ SIR ಪ್ರಕ್ರಿಯೆ ನಿಲ್ಲುವುದಿಲ್ಲ, ಅಂತೆಯೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕೂಡ ತಮ್ಮ ಸ್ಥಾನದಿಂದ ಕೆಳಗಿಳಿಯುವುದಿಲ್ಲ' ಎಂದು ಹೇಳಿದ್ದಾರೆ.

ಅಲ್ಲದೆ ಸಿಜೆಪಿ ನಾಯಕರ ಈ ಪ್ರತಿಭಟನೆಗಳು ಎಷ್ಟು ದಿನ ಮುಂದುವರಿಯಲು ಸಾಧ್ಯ ಎಂಬುದೇ ನಿಜವಾದ ಪ್ರಶ್ನೆ’ ಎಂದು ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧದ ವಿರೋಧದ ಹಿನ್ನೆಲೆಯಲ್ಲಿ ಭೂಪೇಂದ್ರ ಚೌಬೆ ಅವರ ಈ ಹೇಳಿಕೆ ಗಮನ ಸೆಳೆದಿದೆ.

SIR ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ವಿರೋಧ ಪಕ್ಷಗಳು, ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಖಚಿತಪಡಿಸಬೇಕೆಂದು ಒತ್ತಾಯಿಸುತ್ತಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ವಿರುದ್ಧ ರಾಜಕೀಯ ವಾಗ್ದಾಳಿ ತೀವ್ರಗೊಂಡಿದ್ದು, ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೂ ಕೆಲವು ನಾಯಕರು ಆಗ್ರಹಿಸಿದ್ದಾರೆ.

ಆದರೆ, SIR ಪ್ರಕ್ರಿಯೆ ಮುಂದುವರಿಯುವ ಸಾಧ್ಯತೆ ಮತ್ತು ಮುಖ್ಯ ಚುನಾವಣಾ ಆಯುಕ್ತರು ತಮ್ಮ ಸ್ಥಾನದಲ್ಲಿ ಮುಂದುವರಿಯುವ ಪರಿಸ್ಥಿತಿಯನ್ನು ಉಲ್ಲೇಖಿಸಿರುವ ಚೌಬೆ, ಪ್ರತಿಭಟನೆಗಳ ನಿರಂತರತೆಯೇ ಪ್ರಮುಖ ಪ್ರಶ್ನೆಯಾಗಿದೆ ಎಂಬ ಸಂದೇಶ ನೀಡಿದ್ದಾರೆ.

ಪ್ರತಿಭಟನೆಗಳ ಮೂಲಕ ರಾಜಕೀಯ ಒತ್ತಡವನ್ನು ಸೃಷ್ಟಿಸಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ, ಅವು ಎಷ್ಟು ಕಾಲ ಮುಂದುವರಿಯುತ್ತವೆ ಮತ್ತು ಅವುಗಳಿಂದ ನಿರೀಕ್ಷಿತ ಪರಿಣಾಮ ಉಂಟಾಗುತ್ತದೆಯೇ ಎಂಬ ಚರ್ಚೆ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.