Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!
ಇದಕ್ಕು ಮುನ್ನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(CJI) ಸೂರ್ಯಕಾಂತ್ ಅವರು ವಿರೋಧ ಪಕ್ಷಗಳ ನಿಯೋಗ ಭೇಟಿ ಮಾಡಲು ನಿರಾಕರಿಸಿದ್ದು, ಬದಲಿಗೆ ನೇರವಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು, ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸೋಮವಾರ ಸುಪ್ರೀಂ ಕೋರ್ಟ್‌ವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿವೆ.
ಕಾಂಗ್ರೆಸ್ ಕರೆ ನೀಡಿರುವ 'ದಿಲ್ಲಿ ಚಲೋ' ಪ್ರತಿಭಟನಾ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಶಶಿ ತರೂರ್, ಸಚಿನ್ ಪೈಲಟ್ ಮತ್ತು ಮುಕುಲ್ ವಾಸ್ನಿಕ್, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಖಿలేಶ್ ಯಾದವ್ ಮತ್ತು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ತೇಜಸ್ವಿ ಯಾದವ್ ಸೇರಿದಂತೆ 'ಇಂಡಿಯಾ' (INDIA) ಮೈತ್ರಿಕೂಟದ ಪ್ರಮುಖ ನಾಯಕರು ಭಾಗವಹಿಸುತ್ತಿದ್ದಾರೆ.
ಇದಕ್ಕು ಮುನ್ನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(CJI) ಸೂರ್ಯಕಾಂತ್ ಅವರು ವಿರೋಧ ಪಕ್ಷಗಳ ನಿಯೋಗ ಭೇಟಿ ಮಾಡಲು ನಿರಾಕರಿಸಿದ್ದು, ಬದಲಿಗೆ ನೇರವಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಭೇಟಿಯ ಮನವಿಗೆ ಸಿಜೆಐ ನೀಡಿದ ಪ್ರತಿಕ್ರಿಯೆಯಲ್ಲಿ, ಪ್ರತಿಪಕ್ಷಗಳು ಪ್ರಸ್ತಾಪಿಸಲು ಉದ್ದೇಶಿಸಿರುವ ವಿಷಯಗಳು ಈಗಾಗಲೇ ನ್ಯಾಯಾಲಯದ ಪರಿಶೀಲನೆಯಲ್ಲಿವೆ (sub judice) ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಅವುಗಳ ವಿಚಾರಣೆ ನಡೆಯುತ್ತಿದೆ ಎಂದು ಹೇಳಿರುವುದಾಗಿ ಮೂಲಗಳು ಹೇಳಿವೆ.
'ಇಂಡಿಯಾ' (INDIA) ಮೈತ್ರಿಕೂಟದ ಸಂಸದರು ಇಂದು 'ಕಾನ್ಸ್ಟಿಟ್ಯೂಷನ್ ಕ್ಲಬ್'ನಲ್ಲಿ ಜಮಾಯಿಸಿ, ಸುಪ್ರೀಂ ಕೋರ್ಟ್‌ವರೆಗೆ ತಮ್ಮ ಪ್ರತಿಭಟನಾ ಮೆರವಣಿಗೆ ನಡೆಸಲು ಬಾರಾಖಂಬ ರಸ್ತೆ ಜಂಕ್ಷನ್‌ನತ್ತ ತೆರಳಿದರು.
ವಿರೋಧ ಪಕ್ಷದ ನಾಯಕರು ಬಾರಾಖಂಬ ರಸ್ತೆಯಿಂದ ಸುಪ್ರೀಂ ಕೋರ್ಟ್‌ವರೆಗೆ "ಪ್ರಜಾಪ್ರಭುತ್ವಕ್ಕಾಗಿ ಮೆರವಣಿಗೆ"ಯನ್ನು (March for Democracy) ಆರಂಭಿಸಲು ಸಿದ್ಧರಾಗಿದ್ದಾರೆ. ನಂತರ, "ಮತ ಕಳ್ಳತನ"ವನ್ನು ತಡೆಯುವಂತೆ ಕೋರಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಿದ್ದಾರೆ.
ಸುಪ್ರೀಂ ಕೋರ್ಟ್‌ಗೆ 'ಇಂಡಿಯಾ' (INDIA) ಮೈತ್ರಿಕೂಟವು ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಿಧಿಸಲಾದ ಭದ್ರತಾ ನಿರ್ಬಂಧಗಳ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಜನರ ಓಡಾಟವನ್ನು ಯಾಕೆ ನಿರ್ಬಂಧಿಸಲಾಗುತ್ತಿದೆ ಎಂದು ಕೇಳಿದರು. "ಇಂದು ದೆಹಲಿಯನ್ನು ಯಾಕೆ ಜೈಲಿನಂತೆ ಮಾಡಲಾಗಿದೆ? ದೆಹಲಿ ಒಂದು ಕೋಟೆಯಂತಾಗಿದೆ ಎಂದು ರಾಹುಲ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



