ದೇಶ

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

ದೆಹಲಿ ಪೊಲೀಸರು 24 ಗಂಟೆಯೊಳಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ದಿನಾಂಕ ನೀಡಬೇಕು. ಇಲ್ಲದಿದ್ದರೆ ಕಾಕ್ರೋಚ್ ಜನತಾ ಪಾರ್ಟಿ ಮತ್ತೊಂದು ಪ್ರತಿಭಟನೆಗೆ ಕರೆ ನೀಡಲಿದೆ.

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!
ಜಿರಳೆ ಜನತಾ ಪಕ್ಷ (ಸಿಜೆಪಿ) ನಾಯಕ ಅಶುತೋಷ್ ರಂಕಾ
Published On :

ನವದೆಹಲಿ: ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತಕ್ಷಣವೇ ದಿನಾಂಕವನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ನೀಡಿದೆ.

ಪೊಲೀಸರು ಈ ಸಮಯದೊಳಗೆ ಅನುಮತಿ ನೀಡದಿದ್ದರೆ, ತಾವೇ ಸ್ವತಂತ್ರವಾಗಿ ಪ್ರತಿಭಟನೆಯ ದಿನಾಂಕವನ್ನು ಘೋಷಿಸುವುದಾಗಿ ಪಕ್ಷದ ನಾಯಕರು ಎಚ್ಚರಿಸಿದ್ದಾರೆ.

CJP ಸಹ ಸಂಚಾಲಕ ಆಶುತೋಷ್ ರಂಕಾ, ಮತ್ತೊಬ್ಬ ಸಹ ಸಂಚಾಲಕ ಸೌರವ್ ದಾಸ್, ಪಕ್ಷದ ಕಾನೂನು ವಿಭಾಗದ ಮುಖ್ಯಸ್ಥೆ ರತ್ನಾ ಸಿಂಗ್ ಸೇರಿದಂತೆ ಇತರ ನಾಯಕರು ಸೋಮವಾರ ಬೆಳಿಗ್ಗೆ 10 ಗಂಟೆಗೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ ಪ್ರತಿಭಟನೆಗೆ ಅನುಮತಿ ಕೋರುವುದಾಗಿ ತಿಳಿಸಿದ್ದಾರೆ.

ದೆಹಲಿ ಪೊಲೀಸರು 24 ಗಂಟೆಯೊಳಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ದಿನಾಂಕ ನೀಡಬೇಕು. ಇಲ್ಲದಿದ್ದರೆ ಕಾಕ್ರೋಚ್ ಜನತಾ ಪಾರ್ಟಿ ಮತ್ತೊಂದು ಪ್ರತಿಭಟನೆಗೆ ಕರೆ ನೀಡಲಿದೆ” ಎಂದು ರಂಕಾ ಭಾನುವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಶನಿವಾರ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿತ್ತು.

ಆದರೆ, ಶನಿವಾರ ಮುಂಬೈನಿಂದ ಬಂದ ವಿಮಾನವು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು.

ವಿಮಾನದಿಂದ ತಮ್ಮನ್ನು ಬಲವಂತವಾಗಿ ಕೆಳಗಿಳಿಸಿ, ವಶಕ್ಕೆ ಪಡೆಯಲು ಸಂಬಂಧಿಸಿದ ಲಿಖಿತ ಕಾರಣಗಳನ್ನು ತೋರಿಸದೆ ಬಂಧನದಲ್ಲಿರಿಸಲಾಗಿತ್ತು ಎಂದು ನಾಯಕರು ಆರೋಪಿಸಿದ್ದಾರೆ.

ಪ್ರತಿಭಟನೆಗೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆ ಹೆಚ್ಚಿಸಿ, ಹಲವು ನಿರ್ಬಂಧಗಳನ್ನು ವಿಧಿಸಲಾಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು.

ಭಾನುವಾರ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ಬಳಿಕ ಮೂವರನ್ನೂ ಬಿಡುಗಡೆ ಮಾಡಲಾಯಿತು. ವಶದಲ್ಲಿದ್ದಾಗ ತಮ್ಮ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು ಮತ್ತು ವಕೀಲರನ್ನು ಸಂಪರ್ಕಿಸಲು ಅವಕಾಶ ನೀಡಿರಲಿಲ್ಲ ಎಂದೂ ಅವರು ಆರೋಪಿಸಿದ್ದಾರೆ.

ಈ ಬೆಳವಣಿಗೆಗಳನ್ನು ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುವಂತಿವೆ ಎಂದು ರಂಕಾ ಟೀಕಿಸಿದ್ದಾರೆ. ಪ್ರತಿಭಟನಾಕಾರರು ದೆಹಲಿಗೆ ತಲುಪದಂತೆ ತಡೆಯಲು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಪ್ರತಿಭಟನಾಕಾರರಿಗೆ ಕಿರುಕುಳ ನೀಡಲಾಗಿದೆ ಎಂದೂ ಆರೋಪಿಸಿದ್ದಾರೆ.

ಚುನಾವಣಾ ಆಯೋಗ ಮತ್ತು ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ವಿರುದ್ಧದ ಹೋರಾಟವನ್ನು ಮುಂದುವರಿಸುವುದಾಗಿ ಸಿಜೆಪಿ ನಾಯಕರು ಹೇಳಿದ್ದಾರೆ. ಪ್ರತಿಭಟನೆ ನಡೆಸುವುದನ್ನು ತಡೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.