'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!
ಹೃದಯಕ್ಕೆ ರಕ್ತ ಪೂರೈಸುವ ಪ್ರಮುಖ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ತೀವ್ರ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಗೋವಾ: ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಅವರು ಅಕ್ಟೋಬರ್ 8ರಂದು ಗೋವಾದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ದೃಢಪಡಿಸಿದೆ ಎಂಬ ಮಾಹಿತಿ ವರದಿಯಾಗಿದೆ.
ಹೃದಯಕ್ಕೆ ರಕ್ತ ಪೂರೈಸುವ ಪ್ರಮುಖ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ತೀವ್ರ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಮರಣೋತ್ತರ ಪರೀಕ್ಷೆಯ ವರದಿಯಲ್ಲಿ, ಹೃದಯದ ಎಡ ಮುಖ್ಯ ಕೊರೊನರಿ ಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ (Left Main Coronary Artery Thrombosis) ತೀವ್ರ ಹೃದಯ ಸ್ನಾಯುವಿನ ಸಾವು ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅಪಧಮನಿಗಳಲ್ಲಿ ಕೊಬ್ಬಿನ ಪದಾರ್ಥಗಳು ಶೇಖರಣೆಯಾಗಿ ರಕ್ತನಾಳ ಕಿರಿದಾಗುವ ಅಥವಾ ಮುಚ್ಚಿಹೋಗುವ ಕಾಯಿಲೆಯ ಹಿನ್ನೆಲೆಯಲ್ಲಿ ಈ ಸ್ಥಿತಿ ಉಂಟಾಗಿದೆ. ಇದನ್ನು ಸಹಜ ಸಾವಿನ ಕಾರಣವೆಂದು ವರದಿಯಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಬೆಳವಣಿಗೆಯ ಬೆನ್ನಲ್ಲೇ, ಹೃದಯದ ಪ್ರಮುಖ ರಕ್ತನಾಳಗಳಲ್ಲಿ ರಕ್ತದ ಹರಿವು ಅಡ್ಡಿಯಾದರೆ ಯಾವ ರೀತಿಯ ಅಪಾಯ ಎದುರಾಗಬಹುದು ಮತ್ತು ಹೃದಯಾಘಾತದ ಮುನ್ಸೂಚನೆಗಳನ್ನು ಹೇಗೆ ಗುರುತಿಸಬೇಕು ಎಂಬುದರ ಕುರಿತು ವೈದ್ಯರು ಮಾಹಿತಿ ನೀಡಿದ್ದಾರೆ.
ಹೃದಯದ ಪ್ರಮುಖ ರಕ್ತನಾಳ ಬ್ಲಾಕ್ ಆದರೆ ಏನಾಗುತ್ತದೆ?
ಮುಂಬೈನ ವೋಕ್‌ಹಾರ್ಟ್ ಆಸ್ಪತ್ರೆಯ ಇಂಟರ್ವೆನ್ಷನಲ್ ಹೃದ್ರೋಗ ತಜ್ಞ ಡಾ. ಪರಿನ್ ಸಂಗೋಯಿ ಅವರ ಪ್ರಕಾರ, ಹೃದಯದ ಎಡ ಮುಖ್ಯ ಕೊರೊನರಿ ಧಮನಿಯು ಹೃದಯದ ದೊಡ್ಡ ಭಾಗದ ಸ್ನಾಯುಗಳಿಗೆ ರಕ್ತ ಪೂರೈಸುತ್ತದೆ. ಹೀಗಾಗಿ, ಇದು ದೇಹದ ಅತ್ಯಂತ ಪ್ರಮುಖ ರಕ್ತನಾಳಗಳಲ್ಲಿ ಒಂದಾಗಿದೆ.
ಈ ರಕ್ತನಾಳ ತೀವ್ರವಾಗಿ ಕಿರಿದಾದರೆ ಅಥವಾ ರಕ್ತ ಹೆಪ್ಪುಗಟ್ಟುವಿಕೆಯಿಂದ ದಿಢೀರ್ ಮುಚ್ಚಿಕೊಂಡರೆ, ಹೃದಯದ ದೊಡ್ಡ ಭಾಗಕ್ಕೆ ರಕ್ತ ಪೂರೈಕೆ ಕೆಲವೇ ನಿಮಿಷಗಳಲ್ಲಿ ಸ್ಥಗಿತಗೊಳ್ಳಬಹುದು. ಇದರಿಂದ ತೀವ್ರ ಹೃದಯಾಘಾತ, ಹೃದಯದ ಬಡಿತದಲ್ಲಿ ಅಪಾಯಕಾರಿ ಬದಲಾವಣೆಗಳು ಹಾಗೂ ಹಠಾತ್ ಹೃದಯ ಸ್ತಂಭನ ಸಂಭವಿಸುವ ಸಾಧ್ಯತೆ ಇರುತ್ತದೆ ಎಂದು ಅವರು ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



