Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ
ಪ್ರತಿಭಟನೆ ಮತ್ತು ಧರಣಿಗಳಿಗೆ ಪರ್ಯಾಯ ಸ್ಥಳಗಳಾಗಿ ರಾಮಲೀಲಾ ಮೈದಾನ, ಬುರಾರಿ ಮೈದಾನ ಹಾಗೂ ಪೂರ್ವ ದೆಹಲಿಯ ಸಿಬಿಡಿ ಮೈದಾನವನ್ನು ಪೊಲೀಸರು ಸೂಚಿಸಿದ್ದಾರೆ.

ನವದೆಹಲಿ: ಜಂತರ್ ಮಂತರ್‌ಗೆ ತೆರಳಲು ಯತ್ನಿಸುತ್ತಿದ್ದ ಕಾಕ್‌ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆಂದು ತಿಳಿದುಬಂದಿದೆ.
ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಲು ನಿಗದಿಪಡಿಸಿದ್ದ ಸ್ಥಳಗಳ ಪಟ್ಟಿಯಿಂದ ಜಂತರ್ ಮಂತರ್ ಅನ್ನು ದೆಹಲಿ ಪೊಲೀಸರು ಕೈಬಿಟ್ಟ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿವೆ.
ಪ್ರತಿಭಟನೆ ಮತ್ತು ಧರಣಿಗಳಿಗೆ ಪರ್ಯಾಯ ಸ್ಥಳಗಳಾಗಿ ರಾಮಲೀಲಾ ಮೈದಾನ, ಬುರಾರಿ ಮೈದಾನ ಹಾಗೂ ಪೂರ್ವ ದೆಹಲಿಯ ಸಿಬಿಡಿ ಮೈದಾನವನ್ನು ಪೊಲೀಸರು ಸೂಚಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ, ಅಜಿಂಕ್ಯ ಶಿಂಧೆ ಸೇರಿದಂತೆ ಪಕ್ಷದ ಹಲವು ಕಾರ್ಯಕರ್ತರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
“ತ್ರಿವರ್ಣ ಧ್ವಜ ಹಿಡಿದಿದ್ದ ಕಾಕ್‌ರೋಚ್‌ಗಳು ಮಂಗಳವಾರ ಮುಂಜಾನೆ ಜಂತರ್ ಮಂತರ್‌ಗೆ ತೆರಳಿದ್ದರು. ಈ ವೇಳೆ ರಂಕಾ, ದಾಸ್, ಶಿಂಧೆ ಸೇರಿದಂತೆ ತಂಡದ ಇತರ ಸದಸ್ಯರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
“ಪ್ರತಿರೋಧದ ಹೋರಾಟವನ್ನು ನೀವು ನಿಷೇಧಿಸಲು ಸಾಧ್ಯವಿಲ್ಲ” ಎಂದು ಹೇಳಿರುವ ದೀಪ್ಕೆ, ತಮ್ಮ ಪೋಸ್ಟ್‌ನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿದ್ದಾರೆ.
ಇದೇ ವೇಳೆ ಸಿಜೆಪಿ ಕಾರ್ಯಕರ್ತರು ಗೇಟ್ ಹಾರಿ ಜಂತರ್ ಮಂತರ್ ಪ್ರವೇಶಿಸುತ್ತಿರುವ ದೃಶ್ಯಗಳಿರುವ ವಿಡಿಯೊವನ್ನೂ ದೀಪ್ಕೆ ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ಕಾರ್ಯಕರ್ತರು “ಭಾರತ್ ಮಾತಾ ಕಿ ಜೈ” ಎಂಬ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸುವ ಪೊಲೀಸರು ಕಾರ್ಯಕರ್ತರನ್ನು ಹಿಡಿದು ವಶಕ್ಕೆ ಪಡೆಯುತ್ತಿರುವ ದೃಶ್ಯವೂ ವಿಡಿಯೊದಲ್ಲಿ ಕಂಡು ಬಂದಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಈ ಬೆಳವಣಿಗೆಗಳ ನಡುವೆಯೇ ನವದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದೆಹಲಿ ಪೊಲೀಸರು ನಗರದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



