ದೇಶ

ನ್ಯಾಯಾಲಯದ ಶುಲ್ಕ ಕೊರತೆ: SIR ವಿರುದ್ಧದ ರಾಹುಲ್ ಗಾಂಧಿ ಅರ್ಜಿಯಲ್ಲಿ 10 ಲೋಪ ಗುರುತಿಸಿದ ಸುಪ್ರೀಂ ಕೋರ್ಟ್!

ಈ ಪ್ರಕರಣದಲ್ಲಿ ಸಹ-ಅರ್ಜಿದಾರರಾಗಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಗುರುತಿನ ಚೀಟಿಯ ಸ್ಪಷ್ಟ ಪ್ರತಿಯನ್ನು ಸಲ್ಲಿಸುವಂತೆ ರಿಜಿಸ್ಟ್ರಿ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ.

ನ್ಯಾಯಾಲಯದ ಶುಲ್ಕ ಕೊರತೆ: SIR ವಿರುದ್ಧದ ರಾಹುಲ್ ಗಾಂಧಿ ಅರ್ಜಿಯಲ್ಲಿ 10 ಲೋಪ ಗುರುತಿಸಿದ ಸುಪ್ರೀಂ ಕೋರ್ಟ್!
ಸುಪ್ರೀಂ ಕೋರ್ಟ್-ರಾಹುಲ್ ಗಾಂಧಿ
Published On :

ನವದೆಹಲಿ: ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿನ ಅಕ್ರಮಗಳು ಮತ್ತು ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಇತರ ವಿರೋಧ ಪಕ್ಷದ ನಾಯಕರು ಸಲ್ಲಿಸಿದ ಅರ್ಜಿಯಲ್ಲಿನ 10ಕ್ಕೂ ಹೆಚ್ಚು ಲೋಪದೋಷಗಳನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಸೋಮವಾರ ಗುರುತಿಸಿದೆ.

ಮೂಲಗಳ ಪ್ರಕಾರ, ಈ ಪ್ರಕರಣದಲ್ಲಿ ಸಹ-ಅರ್ಜಿದಾರರಾಗಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಗುರುತಿನ ಚೀಟಿಯ ಸ್ಪಷ್ಟ ಪ್ರತಿಯನ್ನು ಸಲ್ಲಿಸುವಂತೆ ರಿಜಿಸ್ಟ್ರಿ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ.

ಅಲ್ಲದೆ, ಅರ್ಜಿಯಲ್ಲಿನ ಕೆಲವು ಪುಟಗಳು ಓದಲು ಸಾಧ್ಯವಾಗದಂತಿದೆ, ನ್ಯಾಯಾಲಯದ ಶುಲ್ಕದಲ್ಲಿ 200 ರೂಪಾಯಿಗೂ ಹೆಚ್ಚು ಮೊತ್ತದ ಕೊರತೆ ಇರುವುದನ್ನು ಕೂಡ ರಿಜಿಸ್ಟ್ರಿ ಗಮನಕ್ಕೆ ತಂದಿದೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ ಸೋಮವಾರ, ರಾಹುಲ್ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರು ಅರ್ಜಿಯನ್ನು ಸಲ್ಲಿಸಲು ಸುಪ್ರೀಂ ಕೋರ್ಟ್‌ಗೆ ಮೆರವಣಿಗೆಯಲ್ಲಿ ತೆರಳಿದ್ದರು.

ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ಸಿಂಧುತ್ವವನ್ನು ಈ ಅರ್ಜಿಯು ಪ್ರಶ್ನಿಸಿದೆ. ಈ ಪರಿಷ್ಕರಣೆಯ ನೆಪದಲ್ಲಿ ನೈಜ ಮತದಾರರನ್ನು, ಅದರಲ್ಲೂ ವಿಶೇಷವಾಗಿ ಯುವಕರು, ವಲಸಿಗರು ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾರರನ್ನು ವ್ಯಾಪಕ ಪ್ರಮಾಣದಲ್ಲಿ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಭಾರತೀಯ ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ (CEC) ಜ್ವಾನೇಶ್ ಕುಮಾರ್ ಹಾಗೂ ಇತರ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರನ್ನು ಈ ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಅರ್ಜಿಯಲ್ಲಿ ಸೇರಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ಅರ್ಜಿದಾರರಾಗಿರುವ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಗುರುತಿನ ಚೀಟಿಯ ಸ್ಪಷ್ಟ ಪ್ರತಿಯನ್ನು ಸಲ್ಲಿಸುವಂತೆ ರಿಜಿಸ್ಟ್ರಿ ಅರ್ಜಿದಾರರ ವಕೀಲರಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಜತೆಗೆ, ಅರ್ಜಿಯಲ್ಲಿನ ಕೆಲವು ಪುಟಗಳು ಅಸ್ಪಷ್ಟವಾಗಿದ್ದು, ಇನ್ನೂ ಕೆಲವು ಪುಟಗಳು ಕಾಣೆಯಾಗಿರುವುದನ್ನು ರಿಜಿಸ್ಟ್ರಿ ಪಟ್ಟಿ ಮಾಡಿದೆ. ಇದ್ದಲ್ಲದೆ ನ್ಯಾಯಾಲಯದ ಶುಲ್ಕದಲ್ಲಿ ₹200ಕ್ಕೂ ಅಧಿಕ ಕೊರತೆ ಇರುವುದನ್ನೂ ಉಲ್ಲೇಖಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.