ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್ಫರ್ಟ್- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್
ಆರಂಭಿಕ ವರದಿಗಳಲ್ಲಿ ಬಾಂಬ್ ಬೆದರಿಕೆ ಎಂದು ಹೇಳಲಾಗಿತ್ತಾದರೂ, ಇದು ವಿಮಾನ ಅಪಹರಣದ ವದಂತಿಗೆ ಸಂಬಂಧಿಸಿದ ಎಚ್ಚರಿಕೆಯಾಗಿತ್ತು ಎಂದು ವಿಮಾನ ನಿಲ್ದಾಣದ ಮೂಲವೊಂದು ಮಾಧ್ಯಮಗಳಿಗೆ ತಿಳಿಸಿದೆ.

ಫ್ರಾಂಕ್ಫರ್ಟ್ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವೊಂದನ್ನು ಭದ್ರತಾ ಎಚ್ಚರಿಕೆಯ ಹಿನ್ನೆಲೆಯಲ್ಲಿ ಜೈಪುರಕ್ಕೆ ಮಾರ್ಗ ಬದಲಾಯಿಸಲಾಗಿದ್ದು, ವಿಮಾನವು ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.
ಆರಂಭಿಕ ವರದಿಗಳಲ್ಲಿ ಬಾಂಬ್ ಬೆದರಿಕೆ ಎಂದು ಹೇಳಲಾಗಿತ್ತಾದರೂ, ಇದು ವಿಮಾನ ಅಪಹರಣದ ವದಂತಿಗೆ ಸಂಬಂಧಿಸಿದ ಎಚ್ಚರಿಕೆಯಾಗಿತ್ತು ಎಂದು ವಿಮಾನ ನಿಲ್ದಾಣದ ಮೂಲವೊಂದು ಮಾಧ್ಯಮಗಳಿಗೆ ತಿಳಿಸಿದೆ.
AI 2030 ವಿಮಾನವು ಜೈಪುರದಲ್ಲಿ ಇಳಿದ ಬಳಿಕ ಅದನ್ನು ಪ್ರತ್ಯೇಕ ಪ್ರದೇಶದಲ್ಲಿ ನಿಲ್ಲಿಸಲಾಯಿತು. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF), ಸ್ಥಳೀಯ ಪೊಲೀಸರು ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ (BDDS) ಸಿಬ್ಬಂದಿ ವಿಮಾನ ಮತ್ತು ಪ್ರಯಾಣಿಕರ ಲಗೇಜ್ಗಳನ್ನು ಪರಿಶೀಲಿಸಲು ಆರಂಭಿಸಿದರು.
ಇದು ವಿಮಾನ ಅಪಹರಣದ ವದಂತಿಯೇ ಹೊರತು ಬಾಂಬ್ ಬೆದರಿಕೆಯಲ್ಲ. ಈ ಬಗ್ಗೆ ಅಧಿಕೃತವಾಗಿ ಪ್ರತಿಕ್ರಿಯಿಸಲು ಇದು ತುಂಬಾ ಆರಂಭಿಕ ಹಂತವಾಗಿದೆ. ತನಿಖೆ ನಡೆಯುತ್ತಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಮಾನವು ಭಾರತದ ವಾಯುಪ್ರದೇಶವನ್ನು ಸಮೀಪಿಸುತ್ತಿದ್ದಾಗ ಭದ್ರತಾ ಎಚ್ಚರಿಕೆ ವರದಿಯಾಗಿದೆ. ಬಳಿಕ ವಾಯು ಸಂಚಾರ ನಿಯಂತ್ರಣ (ATC) ಹಾಗೂ ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದ್ದು, ವಿಮಾನವನ್ನು ಜೈಪುರಕ್ಕೆ ಮಾರ್ಗ ಬದಲಾಯಿಸಲಾಯಿತು.
ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ವಿಮಾನದಿಂದ ಇಳಿಸಿ, ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿರುವ ನಿಗದಿತ ಸ್ಥಳಕ್ಕೆ ಕರೆದೊಯ್ಯಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



