ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್
ರೈಲು ನಿಲ್ದಾಣದಿಂದ ಹೊರಡುತ್ತಿದ್ದಾಗ ತೆರೆದ ಕಿಟಕಿಯ ಮೂಲಕ ಪ್ರಯಾಣಿಕರ ಮೊಬೈಲ್ ಕಸಿದುಕೊಳ್ಳಲು ವ್ಯಕ್ತಿಯೊಬ್ಬ ಯತ್ನಿಸಿದ್ದಾನೆ. ಆದರೆ, ರೈಲಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಎಚ್ಚೆತ್ತುಕೊಂಡು ಆತನ ಕೈಗಳನ್ನು ಹಿಡಿದುಕೊಂಡಿದ್ದಾರೆ.

ಬಿಹಾರ: ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರ ಮೊಬೈಲ್ ಕದಿಯಲು ಯತ್ನಿಸಿದನೆನ್ನಲಾದ ಶಂಕಿತ ಕಳ್ಳ ಪ್ರಯಾಣಿಕರ ಕೈಗೆ ಸಿಕ್ಕಿಬಿದ್ದು, ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ ಹೊರಗೆ ನೇತಾಡಿದ ಘಟನೆ ಬಿಹಾರದಲ್ಲಿ ನಡೆದಿದೆ.
ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೈಲು ನಿಲ್ದಾಣಗಳಲ್ಲಿ ಮೊಬೈಲ್ ಕಳ್ಳತನದ ಅಪಾಯದ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ಭಾಗಲ್ಪುರ ಜಿಲ್ಲೆಯ ಶಿವನಾರಾಯಣಪುರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ರೈಲು ನಿಲ್ದಾಣದಿಂದ ಹೊರಡುತ್ತಿದ್ದಾಗ ತೆರೆದ ಕಿಟಕಿಯ ಮೂಲಕ ಪ್ರಯಾಣಿಕರ ಮೊಬೈಲ್ ಕಸಿದುಕೊಳ್ಳಲು ವ್ಯಕ್ತಿಯೊಬ್ಬ ಯತ್ನಿಸಿದ್ದಾನೆ. ಆದರೆ, ರೈಲಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಎಚ್ಚೆತ್ತುಕೊಂಡು ಆತನ ಕೈಗಳನ್ನು ಹಿಡಿದುಕೊಂಡಿದ್ದಾರೆ. ರೈಲು ಮುಂದಕ್ಕೆ ಚಲಿಸಲು ಆರಂಭಿಸಿದರೂ ಪ್ರಯಾಣಿಕ ಕಳ್ಳನ ಕೈಗಳನ್ನು ಬಿಡದೆ ಹಿಡಿದುಕೊಂಡಿದ್ದಾರೆ. ಪರಿಣಾಮ, ವ್ಯಕ್ತಿ ಚಲಿಸುವ ರೈಲಿನ ಹೊರಭಾಗದಲ್ಲಿ ನೇತಾಡುವಂತಾಗಿದೆ.
ಕಳ್ಳನ ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ
ವೈರಲ್ ವಿಡಿಯೊದಲ್ಲಿ ರೈಲು ಮುಂದಕ್ಕೆ ಚಲಿಸುತ್ತಿರುವಾಗ ವ್ಯಕ್ತಿಯೊಬ್ಬ ಕಿಟಕಿಯ ಹೊರಗೆ ನೇತಾಡುತ್ತಾ ತನ್ನ ಹಿಡಿತವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವುದು ಕಾಣಿಸುತ್ತದೆ. ಈ ವೇಳೆ ನಿಲ್ದಾಣದಲ್ಲಿದ್ದ ಜನರು ಘಟನೆಗೆ ಸಾಕ್ಷಿಯಾಗಿದ್ದಾರೆ. ರೈಲು ಸ್ವಲ್ಪ ದೂರ ಚಲಿಸಿದ ಬಳಿಕ ವ್ಯಕ್ತಿ ಪ್ಲಾಟ್ಫಾರ್ಮ್ ಮೇಲೆ ಬಿದ್ದಿದ್ದಾನೆ. ಬಳಿಕ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಎಚ್ಚರಿಕೆ ಅಗತ್ಯ
ಮೊಬೈಲ್ ಕಳ್ಳತನವನ್ನು ತಡೆಯುವ ಪ್ರಯತ್ನದಲ್ಲಿ ಪ್ರಯಾಣಿಕರು ತಮ್ಮ ಜೀವಕ್ಕೂ ಅಪಾಯ ತಂದುಕೊಳ್ಳಬಾರದು. ಚಲಿಸುವ ರೈಲಿನ ಹೊರಗೆ ವ್ಯಕ್ತಿಯನ್ನು ಹಿಡಿದುಕೊಂಡಿರುವುದು ಪ್ರಯಾಣಿಕರು ಮತ್ತು ಶಂಕಿತ ವ್ಯಕ್ತಿ ಇಬ್ಬರಿಗೂ ಗಂಭೀರ ಗಾಯಗಳಾಗುವ ಅಪಾಯವನ್ನುಂಟುಮಾಡಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಕಳ್ಳತನದ ಯತ್ನ ಕಂಡುಬಂದರೆ ರೈಲ್ವೆ ಸಿಬ್ಬಂದಿ ಅಥವಾ ಸರ್ಕಾರಿ ರೈಲ್ವೆ ಪೊಲೀಸ್ (GRP), ರೈಲ್ವೆ ರಕ್ಷಣಾ ಪಡೆ (RPF)ಗೆ ಮಾಹಿತಿ ನೀಡುವಂತೆ ಪ್ರಯಾಣಿಕರಿಗೆ ಸಲಹೆ ನೀಡಲಾಗಿದೆ. ರೈಲ್ವೆಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಮತ್ತು ನೆರವು ಪಡೆಯಲು RailMadad ವೇದಿಕೆಯನ್ನೂ ಬಳಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



