ಆರ್ಎಸ್ಎಸ್ ವಿಜಯದಶಮಿ ಕಾರ್ಯಕ್ರಮಕ್ಕೆ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಗೆ ಆಹ್ವಾನ! ಕಾಂಗ್ರೆಸ್ ವ್ಯಂಗ್ಯ
ಸಂಘಟನೆಯ ಸ್ಥಾಪನಾ ದಿನದ ನೆನಪಿಗಾಗಿ ಪ್ರತಿ ವರ್ಷ ವಿಜಯದಶಮಿಯಂದು ಆಯೋಜಿಸಲಾಗುವ ಈ ಕಾರ್ಯಕ್ರಮಕ್ಕೆ, ಅತಿಥಿಯಾಗಿ ಪಾಲ್ಗೊಳ್ಳುವಂತೆ ಧಂಖರ್ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಆರ್ಎಸ್ಎಸ್ ತಿಳಿಸಿದೆ

ನಾಗ್ಫುರ: ಮುಂದಿನ ವಾರ ನಾಗ್ಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಾರ್ಷಿಕ ವಿಜಯದಶಮಿ ಕಾರ್ಯಕ್ರಮಕ್ಕೆ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಆಹ್ವಾನಿಸಲಾಗಿದೆ.
ಸಂಘಟನೆಯ ಸ್ಥಾಪನಾ ದಿನದ ನೆನಪಿಗಾಗಿ ಪ್ರತಿ ವರ್ಷ ವಿಜಯದಶಮಿಯಂದು ಆಯೋಜಿಸಲಾಗುವ ಈ ಕಾರ್ಯಕ್ರಮಕ್ಕೆ, ಅತಿಥಿಯಾಗಿ ಪಾಲ್ಗೊಳ್ಳುವಂತೆ ಧಂಖರ್ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಆರ್ಎಸ್ಎಸ್ ತಿಳಿಸಿದೆ.
ಅಕ್ಟೋಬರ್ 20 ರಂದು ನಾಗ್ಫುರದ ರೇಷಿಮ್ಬಾಗ್ ಮೈದಾನದಲ್ಲಿ ನಡೆಯಲಿರುವ ಈ ವರ್ಷದ ಕಾರ್ಯಕ್ರಮ ಆರ್ಎಸ್ಎಸ್ನ ಶತಮಾನೋತ್ಸವ ವರ್ಷದ ಸಮಾರೋಪವಾಗಿದೆ. ಈ ಕಾರ್ಯಕ್ರಮದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಭಾಷಣ ಮಾಡಲಿದ್ದು, 'ದೈನಿಕ ಜಾಗರಣ್' ಪತ್ರಿಕೆಯ ಪ್ರಧಾನ ಸಂಪಾದಕ ಸಂಜಯ್ ಗುಪ್ತಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಘವು ತಿಳಿಸಿದೆ.
"ಸಂಘದ ಶತಮಾನೋತ್ಸವ ವರ್ಷದ ಸಮಾರೋಪವನ್ನು ಸೂಚಿಸುವ ಈ ವರ್ಷದ ವಿಜಯದಶಮಿ ಕಾರ್ಯಕ್ರಮಕ್ಕೆ, ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಮಧ್ಯ-ಪಶ್ಚಿಮ ಭಾರತ ಪ್ರದೇಶಕ್ಕಾಗಿ ಇಸ್ರೇಲ್ನ ಕಾನ್ಸುಲ್ ಜನರಲ್ ಆಗಿರುವ ಯನಿವ್ ರೆವಾಚ್ ಅವರನ್ನು ಆಹ್ವಾನಿಸಲಾಗಿದೆ" ಎಂದು ಆರ್ಎಸ್ಎಸ್ ಹೇಳಿದೆ.
ಈ ಕಾರ್ಯಕ್ರಮಕ್ಕೆ ಧಂಖರ್ ಗೆ ಆಹ್ವಾನ ನೀಡಿರುವುದನ್ನು ಮುಂದಿಟ್ಟುಕೊಂಡು, ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದ್ದು, "ಈ ವ್ಯವಸ್ಥೆಯು (ecosystem) ತನ್ನೊಂದಿಗೆ ತಾನೇ ಸಂಘರ್ಷದಲ್ಲಿ ತೊಡಗಿದೆ" ಎಂದು ಟೀಕಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, "ಆರ್ಎಸ್ಎಸ್ನಿಂದ ಧಂಖರ್ ಅವರಿಗೆ ಆಹ್ವಾನ ಬಂದಿದ್ದರೂ, ಕಳೆದ ವರ್ಷ ಜುಲೈನಲ್ಲಿ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿದ ನಂತರ, ಅವರಿಗೆ ಸಿಗಬೇಕಾದ ಅಧಿಕೃತ ನಿವಾಸವನ್ನು ಸರ್ಕಾರ ಇನ್ನೂ ಒದಗಿಸಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



