ದೇಶ

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ತಮಿಳುನಾಡಿನ ತೂತುಕುಡಿ ಜಿಲ್ಲೆಯ ವ್ಯಕ್ತಿಯೊಬ್ಬರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅರ್ಜಿದಾರರು ಹಿಂದೂ ಕುಟುಂಬದಲ್ಲಿ ಜನಿಸಿದ್ದರು

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!
ಸುಪ್ರೀಂಕೋರ್ಟ್
Published On :

ನವದೆಹಲಿ: ಧಾರ್ಮಿಕ ಮತಾಂತರ ಮತ್ತು ಜಾತಿ ಆಧಾರಿತ ಮೀಸಲಾತಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ಕೆಲವರನ್ನು 'ಹಿಂದುಳಿದ ವರ್ಗದ (ಮುಸ್ಲಿಂ)' ಅಡಿಯಲ್ಲಿ ಸೇರಿಸಿ, ಅವರಿಗೆ ಮೀಸಲಾತಿ ಸೌಲಭ್ಯಗಳನ್ನು ಒದಗಿಸುವ ತಮಿಳುನಾಡು ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

ಬೇರೆ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯೊಬ್ಬರು, ತಮ್ಮ ಹಿಂದಿನ ಸಾಮಾಜಿಕ ವರ್ಗದ ಆಧಾರದ ಮೇಲೆ ಮೀಸಲಾತಿ ಸೌಲಭ್ಯಗಳನ್ನು ಪಡೆಯಬಹುದೇ ಅಥವಾ 'ಹಿಂದುಳಿದ ವರ್ಗ (ಮುಸ್ಲಿಂ)' ವರ್ಗದ ಸದಸ್ಯರಾಗಿ ಮೀಸಲಾತಿಗೆ ಅರ್ಹರಾಗಬಹುದೇ ಎಂಬುದು ಈ ಪ್ರಕರಣದ ಮುಖ್ಯ ಪ್ರಶ್ನೆಯಾಗಿತ್ತು.

ಏನಿದು ಪ್ರಕರಣ? ತಮಿಳುನಾಡಿನ ತೂತುಕುಡಿ ಜಿಲ್ಲೆಯ ವ್ಯಕ್ತಿಯೊಬ್ಬರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅರ್ಜಿದಾರರು ಹಿಂದೂ ಕುಟುಂಬದಲ್ಲಿ ಜನಿಸಿದ್ದರು. 2016ರಲ್ಲಿ ಅವರು ಇಸ್ಲಾಂ ಧರ್ಮದ ಪದ್ಧತಿಯಂತೆ ಮಹಿಳೆಯೊಬ್ಬರನ್ನು ವಿವಾಹವಾಗಿ, ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದರು. ತದನಂತರ ನಂತರ ಅವರು ತಮ್ಮ ಹೆಸರನ್ನು 'ಸಮೀರ್ ಅಹ್ಮದ್' ಎಂದು ಬದಲಾಯಿಸಿಕೊಂಡಿದ್ದರು.

ಅರ್ಜಿದಾರರ ಪ್ರಕಾರ, ಕಾಯತಾರ್‌ನ 'ಸುನ್ನತ್ ಜಮಾತ್' ಸಂಸ್ಥೆಯು 2015ರಲ್ಲಿ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ದೃಢೀಕರಿಸಿ ಪ್ರಮಾಣಪತ್ರವೊಂದನ್ನು ನೀಡಿತ್ತು. ತದನಂತರ, ಅವರು 'ಮುಸ್ಲಿಂ ಲೆಬ್ಬೈ' (Muslim Lebbai) ಸಮುದಾಯಕ್ಕೆ ಸೇರಿದವರು ಎಂದು ಹೇಳಿಕೊಂಡು, ಸಮುದಾಯ ಪ್ರಮಾಣಪತ್ರಕ್ಕಾಗಿ (community certificate) ಅರ್ಜಿ ಸಲ್ಲಿಸಿದ್ದರು.

ಆದರೆ, ಕಾಯತಾರ್‌ನ ತಹಸೀಲ್ದಾರರು ಅವರ ಅರ್ಜಿಯನ್ನು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಮದ್ರಾಸ್ ಹೈಕೋರ್ಟ್‌ನ ಮೊರೆ ಹೋಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.