ನಾವೆಲ್ಲರೂ ದೇಶದಲ್ಲಿ ಆಡಳಿತ ಬದಲಾವಣೆ ಬಯಸುತ್ತಿದ್ದೇವೆ; ಹಾಗೆ ಬಯಸುವುದರಲ್ಲಿ ತಪ್ಪೇನಿದೆ? ದೆಹಲಿ ಹೋರಾಟದ ಬಗ್ಗೆ ಪ್ರಶಾಂತ್ ಭೂಷಣ್
ದೇಶದಲ್ಲಿ ಆಡಳಿತ ಬದಲಾವಣೆ ಬಯಸಿದ್ರೆ ತಪ್ಪೇನು? ಸರ್ಕಾರ ಬದಲಾವಣೆ ಬಯಸುವುದು ಸಾಂವಿಧಾನಿಕ ಹಕ್ಕು, ದೇಶದ್ರೋಹವಲ್ಲ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಗುಡುಗು. ಆ ಕುರಿತ ವರದಿ ಇಲ್ಲಿದೆ:

ನವದೆಹಲಿ: "ನಾವೆಲ್ಲರೂ ದೇಶದಲ್ಲಿ ಆಡಳಿತ ಬದಲಾವಣೆ ಬಯಸುತ್ತಿದ್ದೇವೆ, ಹಾಗೆ ಬಯಸುವುದರಲ್ಲಿ ತಪ್ಪೇನಿದೆ?" ಎಂದು ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದಾರೆ. ನವದೆಹಲಿಯ ಪ್ರೆಸ್ ಕ್ಲಬ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಾಯಕರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಪ್ರಜಾಪ್ರಭುತ್ವದ ಹಕ್ಕು
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಬದಲಾಯಿಸಬೇಕು ಎಂದು ಆಶಿಸುವುದು ಅಥವಾ ಜನರಲ್ಲಿ ಜಾಗೃತಿ ಮೂಡಿಸುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕಾಗಿದೆ. ಇದು ಯಾವುದೇ ರೀತಿಯ ಕಾನೂನುಬಾಹಿರ ಅಪರಾಧವಲ್ಲ ಎಂದ ಪ್ರಶಾಂತ್ ಭೂಷಣ್, ಈ ಹಿಂದೆ ಪ್ರತಿಪಕ್ಷದಲ್ಲಿದ್ದಾಗ ಸ್ವತಃ ಬಿಜೆಪಿ ಪಕ್ಷವೇ ಆಡಳಿತ ಬದಲಾವಣೆಗಾಗಿ ದೇಶಾದ್ಯಂತ ಹಲವು ಬಾರಿ ಪ್ರತಿಭಟನೆಗಳನ್ನು ನಡೆಸಿತ್ತು. ಆದರೆ ಈಗ ಬೇರೆಯವರು ಆಡಳಿತ ಬದಲಾವಣೆ ಬಯಸಿದರೆ ಅದನ್ನು 'ಸಂಚು' ಅಥವಾ 'ದೇಶದ್ರೋಹ' ಎಂಬಂತೆ ಬಿಂಬಿಸುತ್ತಿರುವುದು ಬಿಜೆಪಿಯ ಇಬ್ಬಂದಿ ತನವನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನವದೆಹಲಿಯ ಪ್ರೆಸ್ ಕ್ಲಬ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಾಯಕರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಚುನಾವಣಾ ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ. ಜನರ ಮೇಲಿನ ಈ ರೀತಿಯ ದೌರ್ಜನ್ಯಗಳು ಹೀಗೆಯೇ ಮುಂದುವರಿದರೆ ದೇಶದಲ್ಲಿ ಖಂಡಿತವಾಗಿಯೂ ಆಡಳಿತ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಜೊತೆಗೆ, ಹಿಂಸಾಚಾರಕ್ಕೆ ಪ್ರಚೋದನೆ ನೀಡದ ಹೊರತು, ಸರ್ಕಾರದ ನೀತಿಗಳನ್ನು ಟೀಕಿಸುವುದು ಅಥವಾ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವುದನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಈ ಹಿಂದೆ ಸ್ಪಷ್ಟಪಡಿಸಿದೆ ಎಂಬುದನ್ನು ನೆನಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


