'ದೊಡ್ಡ ಅದೃಷ್ಟ, ಭಗವಾನ್ ರಾಮನ ಆಶೀರ್ವಾದ': ರಾಮ ಮಂದಿರ ಟ್ರಸ್ಟ್ CEO ಜಿತೇಂದ್ರ ಮಿಶ್ರಾ ಮೊದಲ ಪ್ರತಿಕ್ರಿಯೆ
ರಾಮ ಮಂದಿರ ಟ್ರಸ್ಟ್ CEO ಆಗಿ ನೇಮಕಗೊಂಡ ನಂತರ ಮೊದಲ ಬಾರಿ ಪ್ರತಿಕ್ರಿಯಿಸಿದ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರು, ಉನ್ನತ ಹುದ್ದೆಗೆ ಆಯ್ಕೆಯಾಗಿದ್ದು ತಮ್ಮ ಅದೃಷ್ಟ ಎಂದು ಹೇಳಿದ್ದಾರೆ.

ಲಖನೌ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ಆಯ್ಕೆ ಮಾಡಲಾಗಿದೆ.
ರಾಮ ಮಂದಿರ ಟ್ರಸ್ಟ್ CEO ಆಗಿ ನೇಮಕಗೊಂಡ ನಂತರ ಮೊದಲ ಬಾರಿ ಪ್ರತಿಕ್ರಿಯಿಸಿದ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರು, ಉನ್ನತ ಹುದ್ದೆಗೆ ಆಯ್ಕೆಯಾಗಿದ್ದು ತಮ್ಮ ಅದೃಷ್ಟ ಎಂದು ಹೇಳಿದ್ದಾರೆ.
ತಮ್ಮ ನೇಮಕಾತಿಯ ಬಗ್ಗೆ ಪ್ರತಿಕ್ರಿಯಿಸಿದ ಮಿಶ್ರಾ, ಹಲವಾರು ಅಭ್ಯರ್ಥಿಗಳಲ್ಲಿ ನಾನು ಆಯ್ಕೆಯಾಗಿರುವುದು ಭಗವಾನ್ ರಾಮನ ಆಶೀರ್ವಾದ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
"... ಅವರು ಹಲವು ಅಭ್ಯರ್ಥಿಗಳಲ್ಲಿ ನನ್ನ ಆಯ್ಕೆ ಮಾಡಿರುವುದು ಒಂದು ದೊಡ್ಡ ಅದೃಷ್ಟ ಎಂದು ಭಾವಿಸುತ್ತೇನೆ. ವಾಯುಪಡೆಯಲ್ಲಿ 43 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿದ ನಂತರ, ಶ್ರೀ ರಾಮ ಮಂದಿರ ಮತ್ತು ಶ್ರೀ ರಾಮ ಭಕ್ತರಿಗೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ್ದಾರೆ. ಇದು ಶ್ರೀ ರಾಮನ ಆಶೀರ್ವಾದ ಎಂದು ನಾನು ಪರಿಗಣಿಸುತ್ತೇನೆ..." ಎಂದು ಏರ್ ಮಾರ್ಷಲ್(ನಿವೃತ್ತ) ಮಿಶ್ರಾ ತಿಳಿಸಿದ್ದಾರೆ.
ಭಾರತೀಯ ವಾಯುಪಡೆಯಲ್ಲಿ ಹಲವಾರು ಕಮಾಂಡಿಂಗ್ ಹುದ್ದೆಗಳನ್ನು ಹೊಂದಿದ್ದ ಮಿಶ್ರಾ ಅವರು, ಆಪರೇಷನ್ ಸಿಂಧೂರ್ ಸಮಯದಲ್ಲಿ ಪಶ್ಚಿಮ ಕಮಾಂಡ್ನ ಮುಖ್ಯಸ್ಥರಾಗಿದ್ದರು. ಇದೀಗ ರಾಮ ಮಂದಿರ ಟ್ರಸ್ಟ್ CEO ಆಗಿ ನೇಮಕಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



