ದೇಶ

ಭೀಕರ ಅಪಘಾತ: ಕೃಷಿ ಬಾವಿಗೆ ನುಗ್ಗಿದ RTC ಬಸ್‌; ತಪ್ಪಿದ ಭಾರೀ ದುರಂತ, Video

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (TGSRTC) ಬಸ್‌ವೊಂದು ನಿಯಂತ್ರಣ ತಪ್ಪಿ ಕೃಷಿ ಬಾವಿಯತ್ತ ನುಗ್ಗಿದ ಘಟನೆ ಜಿಲ್ಲೆಯ ಚಿಗುರುಮಾಮಿಡಿ ಮಂಡಲದ ಸುಂದರಗಿರಿ ಗ್ರಾಮದಲ್ಲಿ ನಡೆದಿದೆ.

ಭೀಕರ ಅಪಘಾತ: ಕೃಷಿ ಬಾವಿಗೆ ನುಗ್ಗಿದ RTC ಬಸ್‌; ತಪ್ಪಿದ ಭಾರೀ ದುರಂತ, Video
ಕೃಷಿ ಬಾವಿಗೆ ಢಿಕ್ಕಿಯಾದ ಆರ್ ಟಿಸಿ ಬಸ್
Published On :

ಕರೀಂನಗರ: ತೆಲಂಗಾಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದೆ.

ಹೌದು.. ತೆಲಂಗಾಣದ ಕರೀಂನಗರದಲ್ಲಿ ಬುಧವಾರ ಭಾರೀ ರಸ್ತೆ ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (TGSRTC) ಬಸ್‌ವೊಂದು ನಿಯಂತ್ರಣ ತಪ್ಪಿ ಕೃಷಿ ಬಾವಿಯತ್ತ ನುಗ್ಗಿದ ಘಟನೆ ಜಿಲ್ಲೆಯ ಚಿಗುರುಮಾಮಿಡಿ ಮಂಡಲದ ಸುಂದರಗಿರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಬಸ್‌ ಕರೀಂನಗರದಿಂದ ಹುಸ್ನಾಬಾದ್‌ಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅಪಘಾತದ ವೇಳೆ ಬಸ್‌ನ ಮುಂಭಾಗದ ಒಂದು ಚಕ್ರ ಬಾವಿಯೊಳಗೆ ನುಗ್ಗಿದ್ದು, ಬಸ್‌ ಬಾವಿಗೆ ಉರುಳುವ ಹಂತಕ್ಕೆ ತಲುಪಿತ್ತು. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ.

ಬಸ್‌ ಬಾವಿಯೊಳಗೆ ಬೀಳುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರು ಭಯಭೀತರಾಗಿ ಕಿರುಚಾಡಿ ನೆರವಿಗಾಗಿ ಕೂಗಿದ್ದಾರೆ.

ಅದೃಷ್ಟವಶಾತ್ ಬಸ್‌ ಬಾವಿ ತಡೆಗೋಡೆಗೆ ಡಿಕ್ಕಿಯಾಗಿ ಅಲ್ಲಿಯೇ ನಿಂತಿದೆ. ಬಸ್ ಸಂಪೂರ್ಣವಾಗಿ ಬಾವಿಗೆ ಉರುಳದೆ ನಿಂತಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದ್ದು, ಸ್ಥಳೀಯರು ಹಾಗೂ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.