ದೇಶ

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ಪ್ರತಿದಿನ 6,000 ಕ್ಯೂಸೆಕ್ ನೀರು ಹರಿಸಲು CWRA ಆದೇಶ

ವಿನೀತ್ ಗುಪ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಸಮಿತಿ ಪರಿಶೀಲಿಸಿತು.

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ಪ್ರತಿದಿನ 6,000 ಕ್ಯೂಸೆಕ್ ನೀರು ಹರಿಸಲು CWRA ಆದೇಶ
ಕಾವೇರಿ ಜಲ
Published On :

ನವದೆಹಲಿ: ಕಾವೇರಿ ಜಲ ನಿಯಂತ್ರಣ ಸಮಿತಿಯು (CWRC) ಇಂದು ಮಂಗಳವಾರ, ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಪ್ರತಿದಿನ 6,000 ಕ್ಯೂಸೆಕ್ ಕಾವೇರಿ ನೀರನ್ನು ಹರಿಸುವಂತೆ ಸೂಚಿಸಿದೆ.

ವಿನೀತ್ ಗುಪ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಸಮಿತಿ ಪರಿಶೀಲಿಸಿತು.

ನಾಳೆ ಬೆಳಗ್ಗೆ 8 ಗಂಟೆಯಿಂದ ಮುಂದಿನ 15 ದಿನಗಳ ಕಾಲ ಬಿಳಿಗುಂಡ್ಲುವಿನಲ್ಲಿ 6,000 ಕ್ಯೂಸೆಕ್ ನೀರಿನ ಹರಿವು ಖಚಿತವಾಗುವಂತೆ ಕರ್ನಾಟಕ ತನ್ನ ಜಲಾಶಯಗಳಿಂದ ನೀರು ಬಿಡುಗಡೆ ಮಾಡಬೇಕು ಎಂದು ಸೂಚಿಸಿದೆ.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೈಗೊಂಡ ನಿರ್ಧಾರವನ್ನು ಅನುಮೋದಿಸಿ, ಆಗಸ್ಟ್ 25ರಿಂದ ಇಂದಿನವರೆಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ನಿರ್ದೇಶಿಸಿತ್ತು.

ಆದರೆ, ಸೆಪ್ಟೆಂಬರ್ 4ರಂದು ಕರ್ನಾಟಕವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮನವಿ ಸಲ್ಲಿಸಿ, ನೀರು ಬಿಡುಗಡೆ ಪ್ರಮಾಣವನ್ನು 9,000 ಕ್ಯೂಸೆಕ್‌ನಿಂದ 2,000 ಕ್ಯೂಸೆಕ್‌ಗೆ ಇಳಿಸುವಂತೆ ಕೋರಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.