ಬಾಲಿವುಡ್ ನಟಿ ಅಮೀಷಾ ಪಟೇಲ್ ತಾಯಿಯ ಮನೆಯಲ್ಲಿ ವಜ್ರದ ಬಳೆ ಕಳ್ಳತನ: ಮನೆಗೆಲಸದ ಮಹಿಳೆ ಬಂಧನ!
ಆರೋಪಿಯನ್ನು ಸೀಮಾ ಘಾಟೆ ಎಂದು ಗುರುತಿಸಲಾಗಿದೆ. ಪಾಲ್ಘರ್ ನಿವಾಸಿಯಾಗಿರುವ ಇವರು, ಅಮೀಷಾ ಪಟೇಲ್ ಅವರ ತಾಯಿ ಆಶಾ ಪಟೇಲ್ ಅವರ ಮನೆಯಲ್ಲಿ ಸುಮಾರು ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಮುಂಬೈ: ವಾಣಿಜ್ಯನಗರ ಮುಂಬೈನ ಚರ್ಚ್‌ಗೇಟ್ ಪ್ರದೇಶದಲ್ಲಿರುವ ಬಾಲಿವುಡ್ ನಟಿ ಅಮೀಷಾ ಪಟೇಲ್ ಅವರ ತಾಯಿಯ ಮನೆಯಲ್ಲಿ ಸುಮಾರು 5 ಲಕ್ಷ ರೂ. ಮೌಲ್ಯದ ವಜ್ರದ ಬಳೆಗಳನ್ನು ಕಳವು ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮರೀನ್ ಡ್ರೈವ್ ಪೊಲೀಸರು 40 ವರ್ಷದ ಮನೆಗೆಲಸದ ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಸೀಮಾ ಘಾಟೆ ಎಂದು ಗುರುತಿಸಲಾಗಿದೆ. ಪಾಲ್ಘರ್ ನಿವಾಸಿಯಾಗಿರುವ ಇವರು, ಅಮೀಷಾ ಪಟೇಲ್ ಅವರ ತಾಯಿ ಆಶಾ ಪಟೇಲ್ ಅವರ ಮನೆಯಲ್ಲಿ ಸುಮಾರು ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.
ಆಶಾ ಪಟೇಲ್ ನೀಡಿದ ದೂರಿನ ಮೇರೆಗೆ, ಮರೀನ್ ಡ್ರೈವ್ ಪೊಲೀಸರು ಕಳ್ಳತನದ ಬಗ್ಗೆ ತನಿಖೆ ನಡೆಸಿ, ಆರೋಪಿ ಘಾಟೆ ಅವರನ್ನು ವಿರಾರ್‌ನಲ್ಲಿ ಪತ್ತೆಹಚ್ಚಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯುವ ಮೊದಲು, ಆರಂಭದಲ್ಲಿ ಅಪರಿಚಿತ ಮಹಿಳೆಯೊಬ್ಬಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧನದ ನಂತರ ಘಾಟೆ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅವರನ್ನು ಸೆಪ್ಟೆಂಬರ್ 15 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿತು. ಜನವರಿ 2026 ರಲ್ಲಿ ಮನೆಯಿಂದ ಚಿನ್ನಾಭರಣ ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಆಶಾ ಪಟೇಲ್ ಅವರಿಗೆ ಘಾಟೆ ಅವರ ಮೇಲೆ ಅನುಮಾನವಿತ್ತು. ಹೀಗಾಗಿ ಕಳೆದ ಆರೇಳು ತಿಂಗಳಿಂದ ಕಳ್ಳತನವನ್ನು ಒಪ್ಪಿಕೊಂಡು ಆಭರಣವನ್ನು ಹಿಂತಿರುಗಿಸುವಂತೆ ಕೇಳುತ್ತಿದ್ದರು ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



