ಮೇಘಾಲಯ: ಮಾಜಿ ಶಾಸಕ ಜೆಮಿನೊ ಮಾವ್‌ಥೋ BJP ಸೇರ್ಪಡೆ; ಯುಡಿಪಿಯ 8 ಶಾಸಕರೂ ಸೇರುವ ಸಾಧ್ಯತೆ!
ಮೇಘಾಲಯದ ಮಾಜಿ ಶಾಸಕ ಜೆಮಿನೊ ಮಾವ್‌ಥೋ ಇಂದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಬೆಳವಣಿಗೆಯು ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿಯ (UDF) ಎಂಟು ಶಾಸಕರು ಕೇಸರಿ ಪಕ್ಷಕ್ಕೆ ಸೇರುವ ಮುನ್ಸೂಚನೆಯಾಗಿದೆ...

ಗುವಾಹಟಿ: ಮೇಘಾಲಯದ ಮಾಜಿ ಶಾಸಕ ಜೆಮಿನೊ ಮಾವ್‌ಥೋ ಇಂದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಬೆಳವಣಿಗೆಯು ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿಯ (UDF) ಎಂಟು ಶಾಸಕರು ಕೇಸರಿ ಪಕ್ಷಕ್ಕೆ ಸೇರುವ ಮುನ್ಸೂಚನೆಯಾಗಿದೆ ಎಂದು ಪರಿಗಣಿಸಲಾಗಿದೆ. ಮೇ ತಿಂಗಳಲ್ಲಿ ಯುಡಿಪಿಗೆ ರಾಜೀನಾಮೆ ನೀಡಿದ್ದ ಮಾವ್‌ಥೋ, ಮೇಘಾಲಯ ಬಿಜೆಪಿ ಘಟಕದ ಮುಖ್ಯಸ್ಥ ರಿಕ್‌ಮನ್ ಮೋಮಿನ್ ಮತ್ತು ಹಿರಿಯ ಶಾಸಕ ಅಲೆಕ್ಸಾಂಡರ್ ಲಾಲೂ ಹೆಕ್ ಮತ್ತಿತರರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು.
2021ರಿಂದಲೇ ಬಿಜೆಪಿ ತಮ್ಮನ್ನು ಸಂಪರ್ಕಿಸುತ್ತಿತ್ತು. ಆದರೆ ಪಕ್ಷಕ್ಕೆ ಸೇರುವ ನಿರ್ಧಾರ ಕೈಗೊಳ್ಳುವ ಮೊದಲು ತಾವು ತಮ್ಮ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿ ಸಮಯ ತೆಗೆದುಕೊಂಡಿದ್ದಾಗಿ ತಿಳಿಸಿದರು. ಏತನ್ಮಧ್ಯೆ, ಯುಡಿಪಿಯ ಎಂಟು ಶಾಸಕರ ಗುಂಪೊಂದು ಪಕ್ಷಕ್ಕೆ ಸೇರುವ ಮುನ್ನ ಬಿಜೆಪಿಯ ಕೇಂದ್ರ ನಾಯಕತ್ವದೊಂದಿಗೆ ಮಾತುಕತೆ ನಡೆಸುತ್ತಿದೆ. 12 ಶಾಸಕರನ್ನು ಹೊಂದಿರುವ ಯುಡಿಪಿ, ನ್ಯಾಷನಲ್ ಪೀಪಲ್ಸ್ ಪಾರ್ಟಿ ನೇತೃತ್ವದ ಸರ್ಕಾರದ ಪ್ರಮುಖ ಅಂಗಪಕ್ಷವಾಗಿದೆ. ಆ ಎಂಟು ಶಾಸಕರ ಪೈಕಿ ಒಬ್ಬರಾದ ಒಲ್ಲನ್ ಸಿಂಗ್ ಸುಯಿನ್, ಪಕ್ಷವು ತಮ್ಮ ಬೇಡಿಕೆಗಳ ಪಟ್ಟಿಯನ್ನು ಒಪ್ಪಿಕೊಂಡರೆ ತಾವು ಬಿಜೆಪಿಗೆ ಸೇರುವುದಾಗಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದರು.
ಸಂವಿಧಾನದ ಎಂಟನೇ ಅನುಸೂಚಿಯಲ್ಲಿ 'ಖಾಸಿ' ಭಾಷೆಯನ್ನು ಸೇರಿಸುವುದು, ರಾಜ್ಯದಲ್ಲಿ ಕಲ್ಲಿದ್ದಲು ಗಣಿಗಾರಿಕೆಯ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವುದು ಮತ್ತು ಅಕ್ರಮ ವಲಸೆಯನ್ನು ತಡೆಯಲು ಜಾರಿಗೆ ತರಲಾದ 'ಮೇಘಾಲಯ ನಿವಾಸಿಗಳ ಸುರಕ್ಷತೆ ಮತ್ತು ಭದ್ರತಾ ಕಾಯ್ದೆ'ಯನ್ನು (ಎಂಆರ್‌ಎಸ್‌ಎಸ್‌ಎ) ಜಾರಿಗೊಳಿಸುವುದು ಈ ಬೇಡಿಕೆಗಳಲ್ಲಿ ಸೇರಿವೆ. ಪಕ್ಷದೊಳಗಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಯುಡಿಪಿ ಶುಕ್ರವಾರ ತನ್ನ ಕೇಂದ್ರ ಕಾರ್ಯಕಾರಿ ಸಮಿತಿಯ ಸಭೆಯನ್ನು ಕರೆದಿತ್ತು. ಸುಯಿನ್ ಸೇರಿದಂತೆ ಆ ಎಂಟು ಶಾಸಕರ ಪೈಕಿ ಮೂವರು ಈ ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



