ನಾಗಲ್ಯಾಂಡ್‌ನಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ 9 ಮಂದಿ ಸಾವು!
ನಾಗಾಲ್ಯಾಂಡ್‌ನ ಟ್ಯೂನ್ಸಾಂಗ್ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ನಕಲಿ ಮದ್ಯ ಸೇವಿಸಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಮೂವರು ಸೇರಿದ್ದಾರೆ. ಘಟನೆಯ ನಂತರ ರಾಜ್ಯ ಪೊಲೀಸರು ರೆಡ್ ಅಲರ್ಟ್ ಘೋಷಿಸಿ...

ಕೊಹಿಮಾ: ನಾಗಾಲ್ಯಾಂಡ್‌ನ ಟ್ಯೂನ್ಸಾಂಗ್ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ನಕಲಿ ಮದ್ಯ ಸೇವಿಸಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಮೂವರು ಸೇರಿದ್ದಾರೆ. ಘಟನೆಯ ನಂತರ ರಾಜ್ಯ ಪೊಲೀಸರು ರೆಡ್ ಅಲರ್ಟ್ ಘೋಷಿಸಿ ಅಪರಿಚಿತ ಅಥವಾ ಅನಧಿಕೃತ ಮೂಲಗಳಿಂದ ಖರೀದಿಸಿದ ಮದ್ಯವನ್ನು ಸೇವಿಸದಂತೆ ಜನರಿಗೆ ಮನವಿ ಮಾಡಿದ್ದಾರೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಮೃತರು ಶಂಕಿತ ನಕಲಿ ಮದ್ಯವನ್ನು ಸೇವಿಸಿದ್ದಾರೆ ಎನ್ನಲಾಗಿದೆ. ಮದ್ಯ ಸೇವನೆ ಬಳಿಕ ಉಸಿರಾಟದ ತೊಂದರೆ ಉಂಟಾಗಿ ಸಾವನ್ನಪ್ಪಿದ್ದಾರೆ. ಸಾವಿನ ನಿಖರವಾದ ಕಾರಣ ಇನ್ನೂ ಅಧಿಕೃತವಾಗಿ ದೃಢೀಕರಿಸಲಾಗಿಲ್ಲವಾದರೂ, ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ, ಎಲ್ಲಾ ಸಾವುಗಳು ನಕಲಿ ಮದ್ಯ ಸೇವನೆಯಿಂದ ಸಂಭವಿಸಿವೆ ಎಂದು ಶಂಕಿಸಲಾಗಿದೆ ಎಂದು ನಾಗಾಲ್ಯಾಂಡ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರೂಪಿನ್ ಶರ್ಮಾ ಹೇಳಿದ್ದಾರೆ.
ಸೆಪ್ಟೆಂಬರ್ 10 ಮತ್ತು 11ರಂದು ಟ್ಯೂನ್ಸಾಂಗ್ ಪಟ್ಟಣ ಮತ್ತು ಚೆಂಡಾಂಗ್ ಸ್ಯಾಡಲ್ ಪ್ರದೇಶದಲ್ಲಿ ಒಟ್ಟು ಒಂಬತ್ತು ಸಾವುಗಳು ದಾಖಲಾಗಿವೆ. ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ, ಎಲ್ಲಾ ಸಾವುಗಳು ನೇರವಾಗಿ ಅಥವಾ ಪರೋಕ್ಷವಾಗಿ ಮದ್ಯ ಸೇವನೆಗೆ ಸಂಬಂಧಿಸಿರುವಂತೆ ಕಂಡುಬಂದಿದ್ದು ತನಿಖೆಗಳು ನಡೆಯುತ್ತಿವೆ ಎಂದು ಹೇಳಿಕೆ ತಿಳಿಸಿದೆ.
ಮದ್ಯ ಮಾರಾಟಗಾರನ ಕುಟುಂಬದ ಸದಸ್ಯರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣವನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ ಮತ್ತು ಇದನ್ನು ಸಂಭವನೀಯ ಆತ್ಮಹತ್ಯೆ ಎಂದು ಪರಿಗಣಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



