ಪ್ರಧಾನಿ ಮೋದಿ ಭೇಟಿ ಮಾಡಿದ ಸ್ಕೂಲ್‌ಮೇಟ್; ಭೂ ವಿವಾದದ ಬಗ್ಗೆ CBI ತನಿಖೆಗೆ ಮನವಿ!
ವೋಹ್ರಾ ಮತ್ತು ಪ್ರಧಾನಿ ಮೋದಿ ಗುಜರಾತ್‌ನ ವಡ್ನಗರದಲ್ಲಿರುವ ಬಿಎನ್ ಶಾಲೆಯಲ್ಲಿ ಕ್ಲಾಸ್ ಮೇಟ್ ಗಳಾಗಿದ್ದರು ಎಂದು ವರದಿಯಾಗಿದೆ.

ನವದೆಹಲಿ: ಸ್ಕೂಲ್‌ಮೇಟ್ ಹಾಗೂ ಬಾಲ್ಯದ ಗೆಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಮುಂಬೈನ ಭಯಂದರ್ ಪೂರ್ವದಲ್ಲಿ ದಶಕಗಳಷ್ಟು ಹಳೆಯದಾದ ಭೂ ವಿವಾದದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.
ಮೀರಾ ರಸ್ತೆಯ 81 ವರ್ಷದ ಅಸ್ಗರಲಿ ವೋಹ್ರಾ ಅವರು ಸೆಪ್ಟೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ, ಭೂ ವಿವಾದದ ಬಗ್ಗೆ ಕೇಂದ್ರ ತನಿಖಾ ಸಂಸ್ಥೆ(ಸಿಬಿಐ)ಯಿಂದ ತನಿಖೆ ನಡೆಸಬೇಕೆಂದು ಕೋರಿದ್ದಾರೆ.
ವೋಹ್ರಾ ಮತ್ತು ಪ್ರಧಾನಿ ಮೋದಿ ಗುಜರಾತ್‌ನ ವಡ್ನಗರದಲ್ಲಿರುವ ಬಿಎನ್ ಶಾಲೆಯಲ್ಲಿ ಕ್ಲಾಸ್ ಮೇಟ್ ಗಳಾಗಿದ್ದರು ಎಂದು ವರದಿಯಾಗಿದೆ.
ವೋಹ್ರಾ ಅವರು ಪ್ರಧಾನಿ ಮೋದಿಯ ಭೇಟಿಯ ಸಂದರ್ಭದಲ್ಲಿ, ಹಲವು ವರ್ಷಗಳಿಂದ ಬಾಕಿ ಇರುವ ಭೂ ವಿವಾದದ ಬಗ್ಗೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.
ಭಯಂದರ್ ಪೂರ್ವದ ನವ್‌ಘರ್‌ನಲ್ಲಿರುವ ಸುಮಾರು 2,810 ಚದರ ಮೀಟರ್‌ಗಳಷ್ಟು ಭೂಮಿಗೆ ಸಂಬಂಧಿಸಿದ ವಿವಾದ ಇದಾಗಿದೆ. 1989ರಲ್ಲಿ ನೋಂದಾಯಿತ ಒಪ್ಪಂದದ ಮೂಲಕ ಆ ಆಸ್ತಿಯನ್ನು ಖರೀದಿಸಿದ್ದಾಗಿ ಅವರು ಹೇಳಿದ್ದಾರೆ.
ನಂತರದ ದಿನಗಳಲ್ಲಿ, ಅಂದರೆ 2011ರಲ್ಲಿ, ಈ ಆಸ್ತಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಆರೋಪಿಸಿದ್ದಾರೆ. ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ನಕಲಿ ಮಾಡಲಾಗಿದೆ. ಈ ಬೆಳವಣಿಗೆಗಳ ಬಗ್ಗೆ ಮೂಲ ಮಾಲೀಕರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದೂ ವೋಹ್ರಾ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



