ಬಂಗಾಳದಲ್ಲಿ ರಾಜಕೀಯ ಹೈಡ್ರಾಮಾ: ತನ್ನ ಅಭ್ಯರ್ಥಿ ನಾಮಪತ್ರ ವಾಪಸ್ ಬೆನ್ನಲ್ಲೇ 'ಕೈ'ಗೆ ಮಮತಾ ಬೆಂಬಲ ಘೋಷಣೆ!
ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಮಾಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಘೋಷಿಸಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ರಾಜಕೀಯ ಹೈಡ್ರಾಮಾ ನಡೆದಿದ್ದು, ನಂದಿಗ್ರಾಮ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.
ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಮಾಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಘೋಷಿಸಿದ್ದಾರೆ.
ಮಮತಾ ಬಣದಿಂದ ಕಣಕ್ಕಿಳಿದಿದ್ದ ಅಭ್ಯರ್ಥಿ ಸಂಚಿತಾ ಪ್ರಧಾನ ದೇ ಅವರು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದ ಬಳಿಕ ನಾಮಪತ್ರ ಹಿಂಪಡೆದ ಕೆಲವೇ ಗಂಟೆಗಳಲ್ಲಿ ಮಮತಾ ಬ್ಯಾನರ್ಜಿ ಈ ಘೋಷಣೆ ಮಾಡಿದ್ದಾರೆ.
ನಂದಿಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವ ನಿರ್ಧಾರವನ್ನು ‘ಇಂಡಿಯಾ ಮೈತ್ರಿಕೂಟವನ್ನು ಬಲಪಡಿಸುವ ಉದ್ದೇಶದಿಂದ’ ಕೈಗೊಳ್ಳಲಾಗಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಅಂತೆಯೇ ರೇಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯಾರನ್ನು ಬೆಂಬಲಿಸಬೇಕು ಎಂಬ ಬಗ್ಗೆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಕೊನೇ ಕ್ಷಣದಲ್ಲಿ ಕೈಕೊಟ್ಟ ನಂದಿಗ್ರಾಮ ಅಭ್ಯರ್ಥಿ
ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಬಣದಿಂದ ಕಣಕ್ಕಿಳಿದಿದ್ದ ಸಂಚಿತಾ ಪ್ರಧಾನ ದೇ ಶುಕ್ರವಾರ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.
ಮಮತಾ ಬಣದ ಅಭ್ಯರ್ಥಿ ನಾಮಪತ್ರ ಹಿಂಪಡೆದಿರುವ ಬೆಳವಣಿಗೆ, ಚುನಾವಣಾ ಆಯೋಗವು ತೃಣಮೂಲ ಕಾಂಗ್ರೆಸ್‌ನ ಎರಡು ಬಣಗಳಿಗೆ ಪ್ರತ್ಯೇಕ ಹೆಸರು ಮತ್ತು ಚುನಾವಣಾ ಚಿಹ್ನೆಗಳನ್ನು ನೀಡಿದ ಕೆಲವೇ ಗಂಟೆಗಳ ಬಳಿಕ ನಡೆದಿದೆ.
ಹೀಗಾಗಿ ಅನ್ಯ ಮಾರ್ಗವಿಲ್ಲದೇ ಮಮತಾ ಬ್ಯಾನರ್ಜಿ ತಮ್ಮ ಸಮಾಮ ಮನಸ್ಕ ಪಕ್ಷವಾದ ಕಾಂಗ್ರೆಸ್ ಗೆ ಬಹಿರಂಗವಾಗಿ ಬೆಂಬಲ ಘೋಷಣೆ ಮಾಡಿದ್ದಾರೆ.
ಇದೇ ವೇಳೆ, ಟಿಎಂಸಿಯ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಸ್ಥಗಿತಗೊಳಿಸಿರುವ ಚುನಾವಣಾ ಆಯೋಗದ ಕ್ರಮದ ವಿರುದ್ಧ ಮಮತಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕ್ರಮವನ್ನು ಅವರು ‘ಏಕಪಕ್ಷೀಯ’ ಎಂದು ಬಣ್ಣಿಸಿದ್ದಾರೆ.

ದೀದಿ ಬಣಕ್ಕೆ 'ಫುಟ್ಬಾಲ್', ಬಂಡಾಯಗಾರರಿಗೆ 'ಲಕೋಟೆ': TMC ಚಿಹ್ನೆ ಫ್ರೀಜ್ ಬೆನ್ನಲ್ಲೇ ಚುನಾವಣಾ ಆಯೋಗ ಮಹತ್ವದ ಆದೇಶ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



