ದೀದಿಗೆ ದಿನಕ್ಕೊಂದು ಶಾಕ್: ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್
ರೆಜಿನಗರ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮಮತಾ ಬ್ಯಾನರ್ಜಿ ಬಣದ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ ಅವರು ನಾಟಕೀಯ ಬೆಳವಣಿಗೆಯಲ್ಲಿ ನಾಮಪತ್ರ ವಾಪಸ್ ಪಡೆದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರ ರಾಜಕೀಯ ಅಸ್ತಿತ್ವಕ್ಕೆ ಸವಾಲಾಗುವಂತಹ ಬೆಳವಣಿಗೆಗಳು ಸಂಭವಿಸುತ್ತಿದೆ.
ರಾಜ್ಯದಲ್ಲಿ ಹಲವು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಒಂದು ಕಾಲದಲ್ಲಿ ಟಿಎಂಸಿ ಪಕ್ಷದ ಭದ್ರಕೋಟೆಯಾಗಿದ್ದ ನಂದೀಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಬಣದ ಅಭ್ಯರ್ಥಿ ಸೆ.18 ರಂದು ನಾಮಪತ್ರ ಹಿಂಪಡೆದಿದ್ದರು.
ನಂದಿಗ್ರಾಮದಲ್ಲಿ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದ 24 ಗಂಟೆಗಳಲ್ಲೇ, ರೆಜಿನಗರ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮಮತಾ ಬ್ಯಾನರ್ಜಿ ಬಣದ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ ಅವರು ನಾಟಕೀಯ ಬೆಳವಣಿಗೆಯಲ್ಲಿ ನಾಮಪತ್ರ ವಾಪಸ್ ಪಡೆದಿದ್ದಾರೆ.

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!
ನಂದಿಗ್ರಾಮದಲ್ಲಿ ಹಿನ್ನೆಡೆಯುಂಟಾಗಿದ್ದ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದರು. ಆದರೆ ಬೆಂಬಲ ಘೋಷಣೆಯಾಗುತ್ತಿದ್ದಂತೆಯೇ ಕಾಂಗ್ರೆಸ್ ಅಭ್ಯರ್ಥಿಯನ್ನು ಕೊಲೆ ಕೇಸ್ ನಲ್ಲಿ ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


