ಶಾಲಾ ಮೆಟ್ಟಿಲು ಹತ್ತುವ ವೇಳೆ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ಸಾವು; Video Viral
9 ವರ್ಷದ ವನಿಕಾ ಎಂಬ ಬಾಲಕಿ ತನ್ನ ಸಹಪಾಠಿಗಳೊಂದಿಗೆ ಶಾಲೆಯ ಮೆಟ್ಟಿಲುಗಳ ಮೇಲೆ ಹೋಗುತ್ತಿದ್ದಾಗ ಆಕೆ ಕಾಲು ಜಾರಿ ಮುಖವನ್ನು ಕೆಳಗೆ ಕೊಟ್ಟ ಬಿದ್ದಿದ್ದಾಳೆ.

ಶಾದ್‌ನಗರ: ಶಾಲೆಯ ಮೆಟ್ಟಿಲಿನಿಂದ ಆಕಸ್ಮಿಕವಾಗಿ ಬಿದ್ದು 9 ವರ್ಷದ 4ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾದ್‌ನಗರದಲ್ಲಿ ನಡೆದಿದೆ.
ಶಾದ್‌ನಗರದ ಇಂಡಿಯನ್ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
9 ವರ್ಷದ ವರ್ಣಿಕಾ ಎಂಬ ಬಾಲಕಿ ತನ್ನ ಸಹಪಾಠಿಗಳೊಂದಿಗೆ ಶಾಲೆಯ ಮೆಟ್ಟಿಲುಗಳ ಮೇಲೆ ಹೋಗುತ್ತಿದ್ದಾಗ ಆಕೆ ಕಾಲು ಜಾರಿ ಮುಖವನ್ನು ಕೆಳಗೆ ಕೊಟ್ಟ ಬಿದ್ದಿದ್ದಾಳೆ. ಇದರಿಂದ ಆಕೆಗೆ ಗಂಭೀರ ಗಾಯವಾಗಿದ್ದು, ಶಾಲಾ ಸಿಬ್ಬಂದಿ ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿದ್ದಾರೆ.
ಆದರೆ ಚಿಕಿತ್ಸೆ ಫಲಕಾರಿಯಾಗದೇ ವನಿಕಾ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಘಟನೆಯಲ್ಲಿ ಬಾಲಕಿಯ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಆಕೆ ಪ್ರಜ್ಞೆ ಕಳೆದುಕೊಂಡಿದ್ದಾಳೆ.
ವಿಡಿಯೋ ವೈರಲ್
ಶಾಲೆಯ ಮೆಟ್ಟಿಲಿನ ಸಮೀಪ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿದೆ. ಬಾಲಕಿ ಮೆಟ್ಟಿಲಿನಿಂದ ಜಾರಿ ಬೀಳುವ ದೃಶ್ಯ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಶಾದ್‌ನಗರ ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



