ಸದರ್ ಬಜಾರ್ ಅಂಗಡಿಯಲ್ಲಿ ಹೀನ ಕೃತ್ಯ: ನೋಟ್‌ಬುಕ್ ಖರೀದಿಸಲು ಬಂದ ಬಾಲಕಿಗೆ ಕೈ-ಕಾಲು ಕಟ್ಟಿ ಹಾಕಿ ಅತ್ಯಾಚಾರ!
ಬಾಲಕಿ ನೋಟ್‌ಬುಕ್ ಮತ್ತು ಪೆನ್ನು ಸೇರಿದಂತೆ ಇತರೆ ಸ್ಟೇಷನರಿ ವಸ್ತುಗಳನ್ನು ಖರೀದಿಸಲು ಅಂಗಡಿಗೆ ಬಂದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನವದೆಹಲಿ: ದೆಹಲಿಯ ಸದರ್ ಬಜಾರ್ ಪ್ರದೇಶದ ಅಂಗಡಿಯೊಂದರಲ್ಲಿ ಪಾಪಿಗಳು ಹೀನ ಕೃತ್ಯ ಎಸಗಿದ್ದು, 6ನೇ ತರಗತಿಯ 10 ವರ್ಷದ ವಿದ್ಯಾರ್ಥಿನಿಯ ಕೈ ಮತ್ತು ಕಾಲುಗಳನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ನೋಟ್‌ಬುಕ್ ಮತ್ತು ಪೆನ್ನು ಸೇರಿದಂತೆ ಇತರೆ ಸ್ಟೇಷನರಿ ವಸ್ತುಗಳನ್ನು ಖರೀದಿಸಲು ಅಂಗಡಿಗೆ ಬಂದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಕ್ಸೊ ಕಾಯ್ದೆಯು ಮಕ್ಕಳನ್ನು ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲತೆಯಿಂದ ರಕ್ಷಿಸಲು ಕಾನೂನು ಚೌಕಟ್ಟನ್ನು ಒದಗಿಸುತ್ತದೆ ಮತ್ತು ಅಂತಹ ಅಪರಾಧಗಳ ವರದಿ ಮತ್ತು ತನಿಖೆಗೆ ಕಾರ್ಯವಿಧಾನಗಳನ್ನು ರೂಪಿಸುತ್ತದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ 56 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಬಾಲಕಿ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಾಳೆ.
ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



