ಹಬ್ಬದ ಸಂಭ್ರಮದ ನಡುವೆ ದುರಂತ: ಕೊಯೆಲ್ ನದಿಯಲ್ಲಿ ಮೂವರು ಅಪ್ರಾಪ್ತರು ಸೇರಿ 5 ಮಂದಿ ಜಲಸಮಾಧಿ!
ಬುಧವಾರ ಕೊಯೆಲ್ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಚೈನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಕಾಯಾ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಲಮು: ಬುಡಕಟ್ಟು ಸಮುದಾಯದ ಪ್ರಮುಖ ಹಬ್ಬವಾದ ಕರಮ್ಗಾಗಿ ಪೂಜಿಸಲಾಗಿದ್ದ ಮರದ ಕೊಂಬೆಯನ್ನು ನದಿಯಲ್ಲಿ ವಿಸರ್ಜಿಸುವ ವೇಳೆ ಸಂಭವಿಸಿದ ದುರಂತದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಜಾರ್ಖಂಡ್ನ ಪಾಲಮು ಜಿಲ್ಲೆಯಲ್ಲಿ ನಡೆದಿದೆ.
ಬುಧವಾರ ಕೊಯೆಲ್ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಚೈನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಕಾಯಾ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾರ್ಖಂಡ್ನಲ್ಲಿ ಸರಹುಲ್ ಬಳಿಕದ ಪ್ರಮುಖ ಬುಡಕಟ್ಟು ಹಬ್ಬಗಳಲ್ಲಿ ಒಂದಾದ ಕರಮ್ ಹಬ್ಬವನ್ನು ಮಂಗಳವಾರ ಆಚರಿಸಲಾಗಿತ್ತು. ಹಬ್ಬದ ಅಂಗವಾಗಿ ಪೂಜಿಸಲಾಗಿದ್ದ ಕರಮ್ ಮರದ ಕೊಂಬೆಯನ್ನು ನದಿಯಲ್ಲಿ ವಿಸರ್ಜಿಸುವ ಮೂಲಕ ಹಬ್ಬದ ಆಚರಣೆ ಅಂತ್ಯಗೊಳ್ಳುತ್ತದೆ ಎಂದು ಹೇಳಲಾಗಿದೆ.
ಅದರಂತೆ ಐವರು ಕರಮ್ ಮರದ ಕೊಂಬೆಯನ್ನು ನದಿಯಲ್ಲಿ ವಿಸರ್ಜಿಸಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿ ಐವರೂ ನೀರಿನಲ್ಲಿ ಮುಳುಗಿದ್ದಾರೆ ಎಂದು ಪಾಲಮು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಪಿಲ್ ಚೌಧರಿ ತಿಳಿಸಿದ್ದಾರೆ.
ನದಿಯಲ್ಲಿ ಶೋಧ ಕಾರ್ಯ ನಡೆಸಿ ಐವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



