ಬಿಹಾರ, ಪಶ್ಚಿಮ ಬಂಗಾಳದಲ್ಲಿ ಮರು ಚುನಾವಣೆಗೆ ಆರ್‌ಜೆಡಿ ಒತ್ತಾಯ!
ಪಾಟ್ನಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೇಜಸ್ವಿ ಯಾದವ್, "ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಕಾರಣದಿಂದಾಗಿ ಬಿಜೆಪಿ ಬಿಹಾರ, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಚುನಾವಣೆಯಲ್ಲಿ ಗೆದ್ದಿದೆ ಎಂದು ಹೇಳಿದರು.

ಪಾಟ್ನಾ: ಬಿಹಾರ ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗಳಲ್ಲಿ ಅಕ್ರಮ ನಡೆದಿದ್ದು, ಈ ಎರಡು ರಾಜ್ಯಗಳಲ್ಲಿ ಮರು ಚುನಾವಣೆ ನಡೆಸಬೇಕು ಎಂದು ರಾಷ್ಟ್ರೀಯ ಜನತಾ ದಳದ (RJD) ನಾಯಕ ತೇಜಸ್ವಿ ಯಾದವ್ ಬುಧವಾರ ಪ್ರತಿಪಾದಿಸಿದ್ದಾರೆ.
ದೇಶಾದ್ಯಂತ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ಸಂದರ್ಭದಲ್ಲಿ ವಿವಿಧ ರಾಜ್ಯಗಳಲ್ಲಿ ಹೆಸರುಗಳನ್ನು ಕೈಬಿಡುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ವರದಿಯನ್ನು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪ್ರಕಟಿಸಿದ ನಂತರ ಯಾದವ್ ಈ ಹೇಳಿಕೆ ನೀಡಿದ್ದಾರೆ. ಈ ವರದಿಯು ರಾಜಕೀಯದಲ್ಲಿ ದೊಡ್ಡ ಕೋಲಾಹಲವನ್ನೇ ಸೃಷ್ಟಿಸಿದೆ.
ಪಾಟ್ನಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೇಜಸ್ವಿ ಯಾದವ್, "ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಕಾರಣದಿಂದಾಗಿ ಬಿಜೆಪಿ ಬಿಹಾರ, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಚುನಾವಣೆಯಲ್ಲಿ ಗೆದ್ದಿದೆ ಎಂದರು.
ಚುನಾವಣಾ ಆಯೋಗದ (EC) ನಿಜವಾದ ಸ್ವರೂಪ ಈಗ ಬಯಲಾಗಿದೆ. ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ದೇಶನದ ಮೇರೆಗೆ ಕೆಲಸ ಮಾಡುತ್ತಿದ್ದಾರೆ. ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಮರು ಚುನಾವಣೆ ನಡೆಯಬೇಕು ಎಂದು ಆಗ್ರಹಿಸಿದರು.
"ಸಂವಿಧಾನಾತ್ಮಕ ಸಂಸ್ಥೆಗಳು ಬಿಜೆಪಿಯ ಘಟಕಗಳಂತೆ ವರ್ತಿಸುತ್ತಿವೆ. ಮೋದಿ, ಶಾ ಮತ್ತು ಕುಮಾರ್ ಅವರು ಕೇಂದ್ರ ಚುನಾವಣಾ ಆಯೋಗವನ್ನು ಬಹಿರಂಗವಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರ್‌ಜೆಡಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರು ಆರೋಪಿಸಿದರು.
ಕಳೆದ 10 ತಿಂಗಳುಗಳಲ್ಲಿ ಎಸ್‌ಐಆರ್ (SIR)ಗೆ ಸಂಬಂಧಿಸಿದ ನಿರ್ಧಾರಗಳು ಮತ್ತು ಆದೇಶಗಳ ಬಗ್ಗೆ ಸಂಧು ಮತ್ತು ಜೋಶಿ ಅವರು ಕನಿಷ್ಠ 14 ಬಾರಿ ಔಪಚಾರಿಕವಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ.
ಆದಾಗ್ಯೂ, ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಧಾರಗಳನ್ನು ಮೂವರು ಆಯುಕ್ತರ ಒಪ್ಪಿಗೆಯೊಂದಿಗೆ ಸರ್ವಾನುಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



