ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಪಿಕಪ್ ಕ್ರೇನ್, Video
ಅಪಘಾತದ ಬಳಿಕ ಕ್ರೇನ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಮೃತ ವಿದ್ಯಾರ್ಥಿನಿಯನ್ನು ಪ್ರೇರಣಾ ನೀನಾಮಾ ಎಂದು ಗುರುತಿಸಲಾಗಿದೆ.

ಅಹಮದಾಬಾದ್: ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಪಿಕಪ್ ಕ್ರೇನ್ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗುಜರಾತ್ ನ ಅಹಮದಾಬಾದ್‌ನ ಗೋತಾ ಪ್ರದೇಶದಲ್ಲಿ ನಡೆದಿದೆ.
ಅಪಘಾತದ ಬಳಿಕ ಕ್ರೇನ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಮೃತ ವಿದ್ಯಾರ್ಥಿನಿಯನ್ನು ಪ್ರೇರಣಾ ನೀನಾಮಾ ಎಂದು ಗುರುತಿಸಲಾಗಿದೆ. ಅವರು ಗೋತಾ ಪ್ರದೇಶದ ಸಿಲ್ವರ್ ಓಕ್ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು.
ಮಂಗಳವಾರ ಬೆಳಗ್ಗೆ ಸುಮಾರು 11.30ರ ವೇಳೆಗೆ ಪ್ರೇರಣಾ ಕಾಲೇಜಿಗೆ ತೆರಳಲು ಮನೆಯಿಂದ ಹೊರಟಿದ್ದರು. ಕಾಲೇಜಿನಿಂದ ಕೇವಲ 200 ಮೀಟರ್‌ಗಳಷ್ಟು ದೂರದಲ್ಲಿದ್ದಾಗ, ಅದೇ ರಸ್ತೆಯಲ್ಲಿ ಬರುತ್ತಿದ್ದ ಪಿಕಪ್ ಕ್ರೇನ್ ಹಿಂದಿನಿಂದ ಬಂದು ಅವರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕ್ರೇನ್ ಅವರ ಮೇಲೆಯೇ ಹರಿದಿದ್ದು, ಗಂಭೀರವಾಗಿ ಗಾಯಗೊಂಡ ಪ್ರೇರಣಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಕ್ರೇನ್ ಚಾಲಕ ಅರುಣ್ ನಿಶಾದ್ ಸ್ಥಳದಿಂದ ಪರಾರಿಯಾಗಿದ್ದಾನೆ. ಕ್ರೇನ್‌ನ ನೋಂದಣಿ ಸಂಖ್ಯೆ GJ 01 RQ 2685 ಎಂದು ಪೊಲೀಸರು ತಿಳಿಸಿದ್ದಾರೆ. ಪಿಕಪ್ ಕ್ರೇನ್ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಲಾಗುತ್ತಿತ್ತು ಎನ್ನಲಾಗಿದೆ.
ತನಿಖೆಗೆ ತಂಡ ರಚನೆ
ಅಪಘಾತದ ಬಳಿಕ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಾಥಮಿಕ ತನಿಖೆಯ ವೇಳೆ ಸ್ಥಳೀಯರೇ ತಂಡವೊಂದನ್ನು ರಚಿಸಿ, ಸಮೀಪದ ಸೋಲಾ ಪ್ರದೇಶದಲ್ಲಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ CCTV ದೃಶ್ಯವೂ ಲಭ್ಯವಾಗಿದ್ದು, ಬೆಳಗ್ಗೆ 11.55ರ ಸುಮಾರಿಗೆ ಪ್ರೇರಣಾ ರಸ್ತೆಯ ಎಡಭಾಗದಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಾಣಿಸುತ್ತದೆ. ಈ ವೇಳೆ ಹಿಂದಿನಿಂದ ಬಂದ ಕ್ರೇನ್ ಅವರಿಗೆ ಡಿಕ್ಕಿ ಹೊಡೆದು, ಅವರ ಮೇಲೆಯೇ ಹರಿದು ಬಳಿಕ ನಿಂತಿರುವುದು ದೃಶ್ಯದಲ್ಲಿ ಸೆರೆಯಾಗಿದೆ.
ಇನ್ನು ಈ ರಸ್ತೆಯ ಭಾಗದಲ್ಲಿ ಫುಟ್‌ಪಾತ್ ಇಲ್ಲ. ಹೀಗಾಗಿ ಪಾದಚಾರಿಗಳು ಅನಿವಾರ್ಯವಾಗಿ ರಸ್ತೆಯಲ್ಲೇ ನಡೆದುಕೊಂಡು ಹೋಗಬೇಕಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಗರಿಕ ಸಂಸ್ಥೆಯ ನಿರ್ಲಕ್ಷ್ಯದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ.
ಪೊಲೀಸರು ಆರೋಪಿ ಕ್ರೇನ್ ಚಾಲಕನನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



