ದೇಶ

'ವೋಟ್ ಚೋರಿಯಿಂದ ಕಾನೂನು ಚೋರಿ'; ಇಡೀ ವ್ಯವಸ್ಥೆ ನಾಶಕ್ಕೆ ಬಿಜೆಪಿ ಸಂಚು: EC, ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!

ಇಂತಹ ಅವ್ಯವಸ್ಥೆಗೆ ಜ್ಞಾನೇಶ್ ಕುಮಾರ್ ಅವರೇ ಕಾರಣ ಎಂದು ಆರೋಪಿಸಿದ ರಾಹುಲ್ ಗಾಂಧಿ, ಇಬ್ಬರು ಚುನಾವಣಾ ಆಯುಕ್ತರು ಇದಕ್ಕಾಗಿ ಮುಖ್ಯ ಚುನಾವಣಾ ಆಯುಕ್ತರನ್ನು (CEC) ದೂಷಿಸಿದ್ದಾರೆ ಎಂದು ಪ್ರತಿಪಾದಿಸಿದರು.

'ವೋಟ್ ಚೋರಿಯಿಂದ ಕಾನೂನು ಚೋರಿ'; ಇಡೀ ವ್ಯವಸ್ಥೆ ನಾಶಕ್ಕೆ ಬಿಜೆಪಿ ಸಂಚು: EC, ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!
ರಾಹುಲ್ ಗಾಂಧಿ
Published On :

ನವದೆಹಲಿ: ಎಸ್ ಐಆರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಆರೋಪವನ್ನು ಸಂಸತ್ತು ರೂಪಿಸಿದ ಕಾನೂನುಗಳ ಸಿಂಧುತ್ವದೊಂದಿಗೆ ಜೋಡಿಸುವ ಮೂಲಕ, ರಾಹುಲ್ ಗಾಂಧಿ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, "ಮತ ಕಳ್ಳತನದಿಂದಲೇ ಕಾನೂನು ಕಳ್ಳತನ ಉಂಟಾಗುತ್ತದೆ. ಇಂದು ಮತವೂ ಹೋಯಿತು, ಕಾನೂನು ರಚನಾ ವ್ಯವಸ್ಥೆಯೂ ಹೋಯಿತು. ಮತವನ್ನೇ ಕದ್ದಿದ್ದರೆ, ಮತ ಕಳ್ಳತನದ ಮೂಲಕ ಸಂಸತ್ತಿಗೆ ಆಯ್ಕೆಯಾದ ಜನಪ್ರತಿನಿಧಿಗಳು ರೂಪಿಸಿದ ಯಾವುದೇ ಕಾನೂನು ಅಥವಾ ಸಾಂಸ್ಥಿಕ ಬದಲಾವಣೆಯೂ ಕಾನೂನುಬಾಹಿರವಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು.

ಇಂತಹ ಅವ್ಯವಸ್ಥೆಗೆ ಜ್ಞಾನೇಶ್ ಕುಮಾರ್ ಅವರೇ ಕಾರಣ ಎಂದು ಆರೋಪಿಸಿದ ರಾಹುಲ್ ಗಾಂಧಿ, ಇಬ್ಬರು ಚುನಾವಣಾ ಆಯುಕ್ತರು ಇದಕ್ಕಾಗಿ ಮುಖ್ಯ ಚುನಾವಣಾ ಆಯುಕ್ತರನ್ನು (CEC) ದೂಷಿಸಿದ್ದಾರೆ ಎಂದು ಪ್ರತಿಪಾದಿಸಿದರು.

ದೇಶಾದ್ಯಂತ SIR ಜಾರಿಯ ಸಂದರ್ಭದಲ್ಲಿ ಕಳೆದ 10 ತಿಂಗಳುಗಳಲ್ಲಿ ಹಲವು ವಿಷಯಗಳಲ್ಲಿ ಇಬ್ಬರು ಚುನಾವಣಾ ಆಯುಕ್ತರು ಮುಖ್ಯ ಚುನಾವಣಾ ಆಯುಕ್ತರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದರು ಎಂಬ ತನಿಖಾ ವರದಿಯೊಂದು ಹೊರಬಂದ ಮರುದಿನವೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯದ ವರದಿಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಮತವು ನಮ್ಮ ರಾಷ್ಟ್ರದ ಅಡಿಪಾಯವಾಗಿದೆ. ಆ ಮತವನ್ನೇ ನಾಶಪಡಿಸಲಾಗಿದೆ. ಇದು ಕೇವಲ ಮತದ ಮೇಲಿನ ದಾಳಿಯಲ್ಲ, ಬದಲಿಗೆ ಪ್ರತಿಯೊಬ್ಬ ಭಾರತೀಯನ ಭಾವನೆ ಮೇಲಿನ ದಾಳಿಯಾಗಿದೆ ಎಂದು ಅವರು ಹೇಳಿದರು.

ಮತದಾರರ ಹಕ್ಕುಗಳನ್ನು ರಕ್ಷಿಸುವ ಜವಾಬ್ದಾರಿ ಚುನಾವಣಾ ಆಯೋಗದ್ದಾಗಿದೆ. ಮತದ ಹಕ್ಕೇ ನಾಶವಾದರೆ ಸಂವಿಧಾನ ಕಾರ್ಯನಿರ್ವಹಿಸುತ್ತಿಲ್ಲ ಎಂದರ್ಥ. ಇಡೀ ವ್ಯವಸ್ಥೆಯ ನಾಶಕ್ಕೆ ಬಿಜೆಪಿ ಸಂಚು ರೂಪಿಸಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.