ದೇಶ

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

ತಮ್ಮ ಜೀವಕ್ಕೆ ಬೆದರಿಕೆ ಕರೆಗಳು ಬಂದಿವೆ. ಆದರೆ, ದೇಶವನ್ನು ಜಾಗೃತಗೊಳಿಸಲು ಸಹಾಯಕವಾಗುವುದಾದರೆ ಯಾವುದೇ ಪರಿಣಾಮವನ್ನು ಎದುರಿಸಲು ತಾವು ಸಿದ್ಧವಿರುವುದಾಗಿ ವಾಂಗ್ ಚುಕ್ ಹೇಳಿದ್ದಾರೆ.

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!
ಸೋನಂ ವಾಂಗ್‌ಚುಕ್
Published On :

ಲಡಾಖ್: ಕಳೆದ ವರ್ಷ ಲೇಹ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿರುವ ಹಾಗೂ ಸರ್ಕಾರದ ವಿರುದ್ಧ ಧ್ವನಿ ಎತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್, 'ಎನ್‌ಕೌಂಟರ್'ನಲ್ಲಿ ತಮ್ಮನ್ನು ಕೊಲ್ಲಬಹುದು ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಜಮ್ಮು -ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮತ್ತು ಆರನೇ ಷೆಡ್ಯೂಲ್‌ನಡಿ ರಕ್ಷಣೆಗಾಗಿ ಕಳೆದ ವರ್ಷ ನಡೆದ ಪ್ರತಿಭಟನೆ ವೇಳೆ ಉಂಟಾದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಇದರ ಮೊದಲ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ವಾಂಗ್‌ಚುಕ್, ತಮ್ಮ ಜೀವಕ್ಕೆ ಬೆದರಿಕೆ ಕರೆಗಳು ಬಂದಿವೆ. ಆದರೆ, ದೇಶವನ್ನು ಜಾಗೃತಗೊಳಿಸಲು ಸಹಾಯಕವಾಗುವುದಾದರೆ ಯಾವುದೇ ಪರಿಣಾಮವನ್ನು ಎದುರಿಸಲು ತಾವು ಸಿದ್ಧವಿರುವುದಾಗಿ ಅವರು ತಿಳಿಸಿದರು.

"ಅವರು ನನ್ನನ್ನು ಜೈಲಿಗೆ ಹಾಕಿದ್ದಾರೆ. ಈಗ ಎಲ್ಲಾದರೂ ನನ್ನನ್ನು 'ಎನ್‌ಕೌಂಟರ್' ಮಾಡುವ ಸಾಧ್ಯತೆಯೂ ಇದೆ. ನಿಮ್ಮನ್ನು ಎನ್‌ಕೌಂಟರ್ ಮಾಡಬಹುದು' ಎಂದು ಜನರು ನನಗೆ ಹೇಳುತ್ತಾರೆ. ಒಂದು ವೇಳೆ ಹಾಗೆ ನಡೆದರೆ ನಡೆಯಲಿ, ಅದರಿಂದಲಾದರೂ ದೇಶ ಎಚ್ಚರಗೊಳ್ಳಲಿ ಎಂದು ಅವರು ಹೇಳಿದರು.

ನ್ಯಾಯಾಂಗ ತನಿಖೆಯ ವರದಿಯನ್ನು ಬಹಿರಂಗಗೊಳಿಸಬೇಕು. ಒಂದು ವೇಳೆ ವರದಿಯನ್ನು ಬಿಡುಗಡೆ ಮಾಡದಿದ್ದರೆ, ಪೊಲೀಸ್ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆಸಲು ಸ್ವತಂತ್ರ 'ಜನತಾ ನ್ಯಾಯಮಂಡಳಿ'ಯನ್ನು (people's tribunal) ರಚಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಳೆದ ವರ್ಷದ ಪ್ರತಿಭಟನೆಯ ವೇಳೆ ಸಂಭವಿಸಿದ ಸಾವುಗಳಿಗೆ ಗೃಹ ಸಚಿವರೇ ರಾಜಕೀಯವಾಗಿ ಹೊಣೆಗಾರರು ಎಂದು ಪ್ರತಿಪಾದಿಸಿದ ವಾಂಗ್‌ಚುಕ್, ಈ ಘಟನೆಗೆ ಸಂಬಂಧಿಸಿದಂತೆ ಹೊಣೆಗಾರಿಕೆಯನ್ನು ಹೊರಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.