'ಭಯೋತ್ಪಾದಕ ದೇಶ ಕೂಡ ಪ್ರಶ್ನೆ ಕೇಳುತ್ತಿದೆ': ಪಾಕ್ ಪತ್ರಕರ್ತನ ಬೆವರಿಳಿಸಿದ ಎಸ್ ಜೈಶಂಕರ್! Video
ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜೈಶಂಕರ್ ಮತ್ತು ಲೈಬೀರಿಯಾದ ವಿದೇಶಾಂಗ ಸಚಿವೆ ಸಾರಾ ಬೇಸೊಲೊ ನ್ಯಾಂತಿ ಅವರು ‘ಹಡಗುಗಳು ಮತ್ತು ಸಮುದ್ರಯಾನಿಕರ ಸುರಕ್ಷತೆ ಹಾಗೂ ಭದ್ರತೆ ಕುರಿತ..

ನ್ಯೂಯಾರ್ಕ್: ವಿಶ್ವಸಂಸ್ಥೆ ಸಾಮಾನ್ಯ ಸಭೆಯ ನಡುವೆ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಶ್ನೆ ಕೇಳಿದ ಪಾಕಿಸ್ತಾನದ ಪತ್ರಕರ್ತನಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಶುಕ್ರವಾರ ಬೆವರಿಳಿಸಿದ ಘಟನೆ ನಡೆದಿದೆ.
ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜೈಶಂಕರ್ ಮತ್ತು ಲೈಬೀರಿಯಾದ ವಿದೇಶಾಂಗ ಸಚಿವೆ ಸಾರಾ ಬೇಸೊಲೊ ನ್ಯಾಂತಿ ಅವರು ‘ಹಡಗುಗಳು ಮತ್ತು ಸಮುದ್ರಯಾನಿಕರ ಸುರಕ್ಷತೆ ಹಾಗೂ ಭದ್ರತೆ ಕುರಿತ ಸ್ನೇಹಿತರ ಗುಂಪು’ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿದ್ದರು.
ಈ ವೇಳೆ ಪಾಕಿಸ್ತಾನದ ಪತ್ರಕರ್ತನೊಬ್ಬ ಎದ್ದು ಜೈಶಂಕರ್ ಅವರಿಗೆ, “ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಪ್ರಾಯೋಜಕತ್ವ ನೀಡುವುದನ್ನು ನಿಮ್ಮ ಸರ್ಕಾರ ಯಾವಾಗ ನಿಲ್ಲಿಸುತ್ತದೆ?” ಎಂದು ಪ್ರಶ್ನಿಸಿದರು.
ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಜೈಶಂಕರ್, “ಭಯೋತ್ಪಾದಕ ದೇಶವೊಂದು ನನಗೆ ಈ ಪ್ರಶ್ನೆ ಕೇಳುತ್ತಿದೆಯೇ? ಕಮ್ ಆನ್” ಎಂದು ಖಾರವಾಗಿ ಹೇಳಿದರು.
ಪ್ರಶ್ನೆಗೆ ಉತ್ತರ ಸಿಕ್ಕಿದೆ!
ಜೈಶಂಕರ್ ಅವರ ಪ್ರತಿಕ್ರಿಯೆಯ ಬಳಿಕ ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಹರೀಶ್ ಪರ್ವತನೇನಿ ಅವರು ಪಾಕಿಸ್ತಾನದ ಪತ್ರಕರ್ತನಿಗೆ, “ನಿಮ್ಮ ಪ್ರಶ್ನೆಗೆ ಉತ್ತರ ಕೇಳಿದ್ದೀರಿ. ನಿಮ್ಮ ಉತ್ತರವನ್ನು ಸ್ಪಷ್ಟವಾಗಿ ಸಿಕ್ಕಿದೆ” ಎಂದು ಹೇಳಿದರು.
ಪಾಕ್ ಪ್ರಧಾನಿಯ ಪ್ರಶ್ನೆ ಕೇಳಿದ್ದ ಭಾರತದ ಪತ್ರಕರ್ತ
ಇದಕ್ಕೂ ಒಂದು ದಿನ ಮೊದಲು, ವಿಶ್ವಸಂಸ್ಥೆಯ ಕಟ್ಟಡ ಪ್ರವೇಶಿಸುತ್ತಿದ್ದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ಭಾರತೀಯ ಪತ್ರಕರ್ತರೊಬ್ಬರು “ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಯಾವಾಗ ನಿಲ್ಲಿಸುತ್ತೀರಿ?” ಎಂದು ಪ್ರಶ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



