'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ': ಪ್ರತಿಪಕ್ಷಗಳಿಗೆ CJP ಅಭಿಜೀತ್ ದೀಪ್ಕೆ ಆಗ್ರಹ
ವಿರೋಧ ಪಕ್ಷಗಳು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಚುನಾವಣೆಯಲ್ಲಿ ಭಾಗವಹಿಸುವುದು ಸರಿಯಲ್ಲ ಎಂದು ದೀಪ್ಕೆ ವಾದಿಸಿದ್ದಾರೆ.

ನವದೆಹಲಿ: ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಗೊತ್ತಾದರೆ, ವಿರೋಧ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಲ್ಲಿಸಬೇಕು ಮತ್ತು ಆ ಚುನಾವಣೆಯನ್ನು ಬಹಿಷ್ಕರಿಸಬೇಕು ಎಂದು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ)ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.
ವಿರೋಧ ಪಕ್ಷಗಳು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಚುನಾವಣೆಯಲ್ಲಿ ಭಾಗವಹಿಸುವುದು ಸರಿಯಲ್ಲ ಎಂದು ದೀಪ್ಕೆ ವಾದಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ದೀಪ್ಕೆ, ವಿರೋಧ ಪಕ್ಷಗಳು ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸಿ, ಚುನಾವಣೆಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
"ಹೌದು, ಚುನಾವಣೆಗಳಲ್ಲಿ ಅಕ್ರಮ ನಡೆಯುತ್ತಿದೆ. ಆದರೆ ನೀವು ಅಕ್ರಮ ನಡೆದ ಚುನಾವಣೆಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸಿದಾಗ, ನೀವು ಈ ಚುನಾವಣೆಗಳನ್ನು ನ್ಯಾಯಸಮ್ಮತಗೊಳಿಸುತ್ತೀರಿ ಮತ್ತು ಅವು ಮುಕ್ತ ಮತ್ತು ನ್ಯಾಯಯುತವಾಗಿವೆ ಎಂಬ ಭ್ರಮೆಯನ್ನು ಹುಟ್ಟಿಸಲು ಸಹಾಯ ಮಾಡುತ್ತೀರಿ" ಎಂದು ದೀಪ್ಕೆ ಹೇಳಿದ್ದಾರೆ.
ಬಹುಶಃ, ಸ್ಪರ್ಧಿಸದಿದ್ದರೆ ತಮ್ಮ ಅಸ್ತಿತ್ವವೇ ಇಲ್ಲವಾಗುತ್ತದೆ ಎಂಬ ಭಯದಿಂದ ನೀವು ಸ್ಪರ್ಧಿಸುತ್ತಿರಬಹುದು. ಆದರೆ ಮತಗಳ ಕಳ್ಳತನ ನಡೆಯುತ್ತಿರುವಾಗ, ನಿಮ್ಮ ಶಾಸಕರು ಮತ್ತು ಸಂಸದರನ್ನು ಸೆಳೆದುಕೊಳ್ಳಲಾಗುತ್ತಿರುವಾಗ ಹಾಗೂ ನಿಮ್ಮ ಪಕ್ಷಗಳನ್ನು ಒಡೆಯಲಾಗುತ್ತಿರುವಾಗ, ನೀವು ಯಾವ ರೀತಿಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಿ ಎಂದು ದೀಪ್ಕೆ ಪ್ರಶ್ನಿಸಿದ್ದಾರೆ.
ಇದು ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳುವ ಕ್ರಮವಲ್ಲ. ನಿಮ್ಮನ್ನು ದುರ್ಬಲಗೊಳಿಸುವ, ನಿಮ್ಮ ಪಕ್ಷವನ್ನು ಒಡೆಯುವ ಅಥವಾ ತನಗೆ ಬೇಕಾದಾಗ ನಿಮ್ಮ ಚುನಾಯಿತ ಪ್ರತಿನಿಧಿಗಳನ್ನು ಕಸಿದುಕೊಳ್ಳುವ ವ್ಯವಸ್ಥೆಯಲ್ಲಿ ನೀವು ಕೇವಲ ಬದುಕುಳಿಯಲು ಪ್ರಯತ್ನಿಸುತ್ತಿದ್ದೀರಿ ಅಷ್ಟೇ. ಹೀಗೆ ನೀವು ಎಷ್ಟು ಕಾಲ ಬದುಕುಳಿಯಲು ಸಾಧ್ಯ? ಎಂದಿದ್ದಾರೆ.
ನಿಮಗೆ ಮುಖ್ಯವೆನಿಸುವ ರಾಜ್ಯಗಳಲ್ಲಿ ಅಕ್ರಮಗಳು ನಡೆದಾಗ ಮಾತ್ರ ಅದರ ಬಗ್ಗೆ ಮಾತನಾಡಿ, ಬೇರೆಡೆ ನಡೆದಾಗ ಮೌನವಾಗಿರಲು ಸಾಧ್ಯವಿಲ್ಲ. ಚುನಾವಣೆಗಳಲ್ಲಿ ಅಕ್ರಮಗಳು ನಡೆಯುತ್ತಿದ್ದರೆ, ಅದು ಯಾವ ರಾಜ್ಯ ಅಥವಾ ಯಾವ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಲೆಕ್ಕಿಸಬಾರದು. ಆಟದಲ್ಲಿ ಭಾಗವಹಿಸುತ್ತಲೇ ಆ ಆಟವು ಅಕ್ರಮಗಳಿಂದ ಕೂಡಿದೆ ಎಂದು ಹೇಳಲು ಸಾಧ್ಯವಿಲ್ಲ. ನಿಮ್ಮ ಭಾಗವಹಿಸುವಿಕೆ ಅಕ್ರಮ ಚುನಾವಣೆಗಳಿಗೆ ಮಾನ್ಯತೆ ನೀಡಬಹುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



