ಗಣೇಶ ಪೆಂಡಾಲ್ ನೊಳಗೆ ಮಲಗಿದವರ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ನಾಲ್ವರು ಸಾವು!
ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ನೈನ್‌ಪುರದ ಹಿರಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ

ಮಂಡ್ಲಾ: ಗಣೇಶ ಪೆಂಡಾಲ್ ನೊಳಗೆ ಮಲಗಿದವರ ಮೇಲೆ ತುಂಡಾಗಿ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ಶನಿವಾರ ನಸುಕಿನ ಜಾವ ನಡೆದಿದೆ.
ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ನೈನ್‌ಪುರದ ಹಿರಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಗಣೇಶ ಮೂರ್ತಿ ವಿಸರ್ಜನೆಯ ನಂತರ ಆಯೋಜಕ ಸಮಿತಿಯ ಸದಸ್ಯರು ವಾಪಸ್ಸಾಗಿದ್ದ ಎಂಟು ಮಂದಿ ಯುವಕರು ಪಂಡಾಲ್‌ನಲ್ಲಿ ಮಲಗಿದ್ದರು ಎಂದು ನೈನ್‌ಪುರ ಪೊಲೀಸ್ ಠಾಣಾಧಿಕಾರಿ ಮನ್ಶಾರಾಮ್ ವಾಗೆನ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತಂತಿ ತುಂಡಾಗಿ ಸಂತ್ರಸ್ತರ ಮೇಲೆ ಬಿದ್ದಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ವಿದ್ಯುತ್ ಸರಬರಾಜು ಪುನರಾರಂಭಗೊಂಡಾಗ ಅವರಿಗೆ ವಿದ್ಯುತ್ ಆಘಾತ ಉಂಟಾಗಿದೆ.
ಘಟನೆಯಲ್ಲಿ ನಾಲ್ವರು ಮೃತಪಟ್ಟರೆ, ಉಳಿದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರೆಲ್ಲರೂ ನೆಲದ ಮೇಲೆ ಮಲಗಿದ್ದರು. ಇಲ್ಲದಿದ್ದರೆ ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿತು ಎಂದು ವಾಗೆನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



