SIR ನೋಟಿಸ್ ಪಡೆದವರಿಗೆ ನೆಮ್ಮದಿ ಸುದ್ದಿ: ಮನೆಗೇ ತೆರಳಿ ದಾಖಲೆ ಸಂಗ್ರಹಿಸಲು BLOಗಳಿಗೆ ಚುನಾವಣಾ ಆಯೋಗ ಸೂಚನೆ!
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ನೋಟಿಸ್ ಪಡೆದಿರುವ ಮತದಾರರಿಗೆ ಚುನಾವಣಾ ಆಯೋಗ ಮಹತ್ವದ ಸೌಲಭ್ಯ ಕಲ್ಪಿಸಿದೆ.

ನವದೆಹಲಿ: SIR ನೋಟಿಸ್ ಪಡೆದವರಿಗೆ ಕೇಂದ್ರ ಚುನಾವಣಾ ಆಯೋಗ ತುಸು ನೆಮ್ಮದಿ ನೀಡಿದ್ದು, ಮನೆಗೇ ತೆರಳಿ ದಾಖಲೆ ಸಂಗ್ರಹಿಸಲು BLOಗಳಿಗೆ ನೀಡಲಾಗಿದೆ.
ಹೌದು.. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ನೋಟಿಸ್ ಪಡೆದಿರುವ ಮತದಾರರಿಗೆ ಚುನಾವಣಾ ಆಯೋಗ ಮಹತ್ವದ ಸೌಲಭ್ಯ ಕಲ್ಪಿಸಿದೆ.
ಅಗತ್ಯ ದಾಖಲೆಗಳನ್ನು ಸಂಗ್ರಹಿಸಲು ಬೂತ್ ಮಟ್ಟದ ಅಧಿಕಾರಿಗಳು (BLO) ನೋಟಿಸ್ ಪಡೆದವರ ಮನೆಗಳಿಗೆ ತೆರಳಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ.
BLOಗಳು ಸಂಗ್ರಹಿಸಿದ ದಾಖಲೆಗಳನ್ನು ಬಳಿಕ ECINet ವೇದಿಕೆಯಲ್ಲಿ ಅಪ್‌ಲೋಡ್ ಮಾಡಲಿದ್ದು, ದೆಹಲಿಯಲ್ಲಿ ನಡೆದ ಚುನಾವಣಾ ಆಯೋಗದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವಿಚಾರಣೆಗೆ ಕರೆಯಲ್ಲ
SIR ನೋಟಿಸ್ ಪಡೆದವರನ್ನು ಇನ್ನು ಮುಂದೆ ಸಾಮಾನ್ಯವಾಗಿ ಚುನಾವಣಾ ನೋಂದಣಿ ಅಧಿಕಾರಿ (ERO) ಮುಂದೆ ವಿಚಾರಣೆಗೆ ಕರೆಯಲಾಗುವುದಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಅತ್ಯಂತ ಅಗತ್ಯವಿರುವ ಅಪರೂಪದ ಸಂದರ್ಭಗಳಲ್ಲಿ ಮಾತ್ರ ವಿಚಾರಣೆ ನಡೆಸಲಾಗುವುದು.
ಸಾಧ್ಯವಾದಷ್ಟು ವಿಚಾರಣೆಯನ್ನು ಆನ್‌ಲೈನ್ ಮೂಲಕ ನಡೆಸಲು ಆದ್ಯತೆ ನೀಡಲಾಗುತ್ತದೆ. ವಿಚಾರಣೆ ಅಗತ್ಯವಾದ ಸಂದರ್ಭದಲ್ಲಿ ಮತದಾರರು ತಮ್ಮ ಪರವಾಗಿ ಹಾಜರಾಗಲು ಕುಟುಂಬದ ಯಾವುದೇ ವಯಸ್ಕ ಸದಸ್ಯರನ್ನು ಅಧಿಕೃತಗೊಳಿಸಬಹುದು ಎಂದು ಆಯೋಗ ತಿಳಿಸಿದೆ.
20 ರಾಜ್ಯಗಳಲ್ಲಿ SIR ಪೂರ್ಣ
ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 20 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ SIR ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
SIR ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿದ್ದರೆ, ಮತ್ತೆ ಹೆಸರು ಸೇರ್ಪಡೆ ಮಾಡಿಸಿಕೊಳ್ಳಲು ಸಂಬಂಧಪಟ್ಟ ಚುನಾವಣಾ ನೋಂದಣಿ ಅಧಿಕಾರಿಗೆ (ERO) ಅರ್ಜಿ ಸಲ್ಲಿಸಬಹುದು ಎಂದು ಆಯೋಗ ತಿಳಿಸಿದೆ.
ಈ ರೀತಿಯಾಗಿ ಹೆಸರು ಸೇರ್ಪಡೆಗೆ ಅರ್ಹರಾಗಿರುವ ಮತದಾರರ ನೋಂದಣಿಗಾಗಿ ಮುಖ್ಯ ಚುನಾವಣಾಧಿಕಾರಿ (CEO), ಜಿಲ್ಲಾ ಚುನಾವಣಾಧಿಕಾರಿ (DEO) ಹಾಗೂ EROಗಳು ತಕ್ಷಣ ವಿಶೇಷ ಅಭಿಯಾನ ಆರಂಭಿಸಬೇಕು ಎಂದು ಸೂಚಿಸಲಾಗಿದೆ.
ರಾತ್ರಿ ಆಶ್ರಯ ತಾಣಗಳು, ಬಡವರು, ನಿರಾಶ್ರಿತರಿಗೆ ವಿಶೇಷ ಶಿಬಿರ
ಜಿಲ್ಲಾ ಚುನಾವಣಾಧಿಕಾರಿಗಳು ಅಗತ್ಯ ಸಂಖ್ಯೆಯಲ್ಲಿ ಸಹಾಯ ಕೇಂದ್ರಗಳನ್ನು (Help Desks) ಸ್ಥಾಪಿಸಬೇಕು. ರಾತ್ರಿ ಆಶ್ರಯ ತಾಣಗಳಲ್ಲಿ ವಾಸಿಸುವವರು, ಕಾರ್ಮಿಕರು, ಬಡವರು ಹಾಗೂ ನಿರಾಶ್ರಿತರು ಸೇರಿದಂತೆ ಅಗತ್ಯವಿರುವವರಿಗೆ ವಿಶೇಷ ಶಿಬಿರಗಳನ್ನು ಆಯೋಜಿಸುವಂತೆ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




