ಮತ್ತಷ್ಟು ಜಾಗತಿಕ ಬಲ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸ್ಥಾನ ಕುರಿತು ಭಾರತಕ್ಕೆ ಪೋರ್ಚುಗಲ್, ಮಾರಿಷಸ್ ಬೆಂಬಲ!
ನ್ಯೂಯಾರ್ಕ್‌ನ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆಯ ಚರ್ಚೆ ವೇಳೆ ಪೋರ್ಚುಗಲ್ ಮತ್ತು ಮಾರಿಷಸ್ ಭಾರತಕ್ಕೆ ಸ್ಪಷ್ಟ ಬೆಂಬಲ ಘೋಷಿಸಿವೆ.

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸ್ಥಾನ ನೀಡಬೇಕೆಂಬ ಭಾರತದ ಬೇಡಿಕೆಗೆ ಮತ್ತಷ್ಟು ಬೆಂಬಲ ವ್ಯಕ್ತವಾಗಿದ್ದು, ಪೋರ್ಚುಗಲ್ ಮತ್ತು ಮಾರಿಷಸ್ ದೇಶಗಳು ಭಾರತದ ಬೆನ್ನಿಗೆ ನಿಂತಿವೆ.
ಹೌದು.. ನ್ಯೂಯಾರ್ಕ್‌ನ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆಯ ಚರ್ಚೆ ವೇಳೆ ಪೋರ್ಚುಗಲ್ ಮತ್ತು ಮಾರಿಷಸ್ ಭಾರತಕ್ಕೆ ಸ್ಪಷ್ಟ ಬೆಂಬಲ ಘೋಷಿಸಿವೆ.
ಸಭೆಯಲ್ಲಿ ಮಾತನಾಡಿದ ಪೋರ್ಚುಗಲ್ ಪ್ರಧಾನಿ ಲುಯಿಸ್ ಮೊಂಟೆನೆಗ್ರೊ, ಪ್ರಸ್ತುತ ಪ್ರಾದೇಶಿಕ ಮತ್ತು ರಾಜಕೀಯ ವಾಸ್ತವಗಳನ್ನು ಪ್ರತಿಬಿಂಬಿಸುವಂತೆ ಭದ್ರತಾ ಮಂಡಳಿಯನ್ನು ಹೆಚ್ಚು ಪ್ರತಿನಿಧಿತ್ವ ಹೊಂದುವ ರೀತಿಯಲ್ಲಿ ಸುಧಾರಿಸಬೇಕಿದ್ದು, ಭಾರತಕ್ಕೆ ಖಾಯಂ ಸದಸ್ಯತ್ವ ನೀಡಬೇಕು ಎಂದು ಹೇಳಿದ್ದಾರೆ.
ಅಂತೆಯೇ ಮಾರಿಷಸ್ ವಿದೇಶಾಂಗ ಸಚಿವ ಧನಂಜಯ್ ರಾಮ್‌ಫುಲ್ ಕೂಡ ಭಾರತಕ್ಕೆ ನೇರ ಬೆಂಬಲ ವ್ಯಕ್ತಪಡಿಸಿದ್ದು, ಜಾಗತಿಕ ವ್ಯವಹಾರಗಳಲ್ಲಿ ಭಾರತದ ರಚನಾತ್ಮಕ ಪಾತ್ರವನ್ನು ಗುರುತಿಸಿ, ಭದ್ರತಾ ಮಂಡಳಿಯಲ್ಲಿ ಖಾಯಂ ಸ್ಥಾನಕ್ಕಾಗಿ ಭಾರತದ ಉಮೇದುವಾರಿಕೆಗೆ ಮಾರಿಷಸ್ ಬೆಂಬಲವನ್ನು ಪುನರುಚ್ಚರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಭಾರತ, ಬ್ರೆಜಿಲ್, ಜರ್ಮನಿ ಮತ್ತು ಜಪಾನ್ ಒಳಗೊಂಡ G4 ಒಕ್ಕೂಟದ ಮೂಲಕ ಮಾರ್ಷಲ್ ದ್ವೀಪಗಳ ಅಧ್ಯಕ್ಷೆ ಹಿಲ್ಡಾ ಹೈನ್ ಕೂಡ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಭದ್ರತಾ ಮಂಡಳಿಯಲ್ಲಿ ಈಗಿರುವ ವ್ಯವಸ್ಥೆ
ಪ್ರಸ್ತುತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಚೀನಾ, ಫ್ರಾನ್ಸ್, ರಷ್ಯಾ, ಬ್ರಿಟನ್ ಮತ್ತು ಅಮೆರಿಕ ಐದು ಖಾಯಂ ಸದಸ್ಯ ರಾಷ್ಟ್ರಗಳಾಗಿವೆ. ಈ ಐದು ರಾಷ್ಟ್ರಗಳಿಗೆ ವೀಟೊ ಅಧಿಕಾರವಿದೆ. ಇನ್ನುಳಿದ 10 ರಾಷ್ಟ್ರಗಳು ಎರಡು ವರ್ಷಗಳ ಅವಧಿಗೆ ಆಯ್ಕೆಯಾಗುವ ಸದಸ್ಯ ರಾಷ್ಟ್ರಗಳಾಗಿವೆ.
ಭದ್ರತಾ ಮಂಡಳಿಯ ಸದಸ್ಯತ್ವ ವ್ಯವಸ್ಥೆಯಲ್ಲಿ ಬದಲಾವಣೆ ತರಲು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮೂರನೇ ಎರಡರಷ್ಟು ಸದಸ್ಯ ರಾಷ್ಟ್ರಗಳ ಅನುಮೋದನೆ ಅಗತ್ಯ. ಇದರ ಜೊತೆಗೆ ಐದು ಖಾಯಂ ಸದಸ್ಯ ರಾಷ್ಟ್ರಗಳನ್ನೂ ಒಳಗೊಂಡಂತೆ ವಿಶ್ವಸಂಸ್ಥೆಯ ಮೂರನೇ ಎರಡರಷ್ಟು ಸದಸ್ಯ ರಾಷ್ಟ್ರಗಳು ತಿದ್ದುಪಡಿಯನ್ನು ಅಂಗೀಕರಿಸಬೇಕಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



