ಟೈರ್ ಬ್ಲಾಸ್ಟ್, 100 ಮೀಟರ್ ಸ್ಕಿಡ್; ನಿಯಂತ್ರಣ ತಪ್ಪಿದ ಫಾರ್ಚುನರ್; ಭಯಾನಕ ಅಪಘಾತದಲ್ಲಿ BJP ಶಾಸಕ ಪಾರು! Video
ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಟೊಯೊಟಾ ಫಾರ್ಚುನರ್ ಕಾರು 100 ಮೀಟರ್‌ಗೂ ಹೆಚ್ಚು ದೂರ ಸ್ಕಿಡ್ ಆಗಿ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಗಂಗಾ ಎಕ್ಸ್‌ಪ್ರೆಸ್‌ವೇ..

ಲಖನೌ: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಬಿಜೆಪಿ ಶಾಸಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೌದು.. ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಟೊಯೊಟಾ ಫಾರ್ಚುನರ್ ಕಾರು 100 ಮೀಟರ್‌ಗೂ ಹೆಚ್ಚು ದೂರ ಸ್ಕಿಡ್ ಆಗಿ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಗಂಗಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.
ಅಪಘಾತದಲ್ಲಿ ಬಿಜೆಪಿ ಶಾಸಕ ಚಂದ್ರಪಾಲ್ ಸಿಂಗ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿದ್ದ ಅವರನ್ನು ಹಾಪುರ್‌ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೊದಲ್ಲಿ ಎಕ್ಸ್‌ಪ್ರೆಸ್‌ವೇನಲ್ಲಿ ಸಾಗುತ್ತಿದ್ದ ಕಾರಿನ ಟೈರ್ ಏಕಾಏಕಿ ಸ್ಫೋಟಗೊಳ್ಳುವುದು ಕಾಣಿಸುತ್ತದೆ. ಬಳಿಕ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಸ್ಕಿಡ್ ಆಗಿದೆ.
ಮಳೆ ನೀರು ರಸ್ತೆಯಲ್ಲಿದ್ದ ಹಿನ್ನೆಲೆಯಲ್ಲಿ ಕಾರು ಮತ್ತಷ್ಟು ಜಾರಿದ್ದು, ಬಳಿಕ ಮುಖ್ಯ ರಸ್ತೆಯಿಂದ ಹೊರಗೆ ಹೋಗಿ ಮಣ್ಣಿನ ಪ್ರದೇಶದಲ್ಲೂ ವೇಗವಾಗಿ ಸ್ಕಿಡ್ ಆಗಿದೆ.
100 ಮೀಟರ್ ಜಾರಿದ ಬೃಹತ್ ಕಾರು
ಅಪಘಾತದ ವೇಳೆ ಟೊಯೋಟಾ ಸಂಸ್ಥೆಯ ಬೃಹತ್ ಕಾರು ಸುಮಾರು 100 ಮೀಟರ್‌ಗೂ ಹೆಚ್ಚು ದೂರ ಜಾರಿದ ಬಳಿಕ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ.
ಕಾರಿನಲ್ಲಿ ಬುಲಂದ್‌ಶಹರ್ ಜಿಲ್ಲೆಯ ಡೆಬಾಯಿ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರಪಾಲ್ ಸಿಂಗ್ ಹಾಗೂ ಮತ್ತೊಬ್ಬ ವ್ಯಕ್ತಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಆಗಿದ್ದೇನು?
ಪ್ರಾಥಮಿಕ ಮಾಹಿತಿಯ ಪ್ರಕಾರ, ಸಿಂಗ್ ಅವರು ಲಖನೌದಿಂದ ವಾಪಸ್ ಬರುತ್ತಿದ್ದಾಗ ವಾಹನದ ಟೈರ್ ಸ್ಫೋಟಗೊಂಡಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ SUV, ಪೊಟಾ ಕಬುಲ್ಪುರ ಗ್ರಾಮದ ಸಮೀಪ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



