45 ಲಕ್ಷ ರೂ ವೆಚ್ಚದಲ್ಲಿ ಅದ್ಧೂರಿ ಮದುವೆ: ನಾಲ್ಕೇ ತಿಂಗಳಿಗೆ ಟೆಕ್ಕಿ ಆತ್ಮಹತ್ಯೆ!
ಆತ್ಮಹತ್ಯೆಗೆ ಶರಣಾದ ಯುವತಿಯನ್ನು ವೈಷ್ಣವಿ ಓಂಕಾರ್ ಗಿಸ್ರೆ (24) ಎಂದು ಗುರುತಿಸಲಾಗಿದ್ದು, ಮೇ 9 ರಂದು ಓಂಕಾರ್ ಸಂಜಯ್ ಗಿಸ್ರೆ (28) ಅವರನ್ನು ವಿವಾಹವಾಗಿದ್ದರು.

ಪುಣೆ: ಅದ್ಧೂರಿಯಾಗಿ ಮದುವೆಯಾದ ಕೇವಲ ನಾಲ್ಕು ತಿಂಗಳ ನಂತರ, 24 ವರ್ಷದ ಎಂಜಿನಿಯರ್ ಒಬ್ಬರು ಪುಣೆಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳದಿಂದ ಯುವತಿ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕುಟುಂಬ ಆರೋಪಿಸಿದೆ.
ಆತ್ಮಹತ್ಯೆಗೆ ಶರಣಾದ ಯುವತಿಯನ್ನು ವೈಷ್ಣವಿ ಓಂಕಾರ್ ಗಿಸ್ರೆ (24) ಎಂದು ಗುರುತಿಸಲಾಗಿದ್ದು, ಮೇ 9 ರಂದು ಓಂಕಾರ್ ಸಂಜಯ್ ಗಿಸ್ರೆ (28) ಅವರನ್ನು ವಿವಾಹವಾಗಿದ್ದರು.
ಮಹಿಳೆಯ ಪೋಷಕರು ಕಳೆದ ಮೇ ತಿಂಗಳಲ್ಲಿ 45 ಲಕ್ಷ ರೂಪಾಯಿ ಖರ್ಚು ಮಾಡಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದಾರೆ. ಅಲ್ಲದೆ 116.64 ಗ್ರಾಂ ಚಿನ್ನವನ್ನು ಅಳಿಯನಿಗೆ ಗಿಫ್ಟ್ ನೀಡಿದ್ದಾರೆ. ಆದರೂ ಕಾರು ಖರೀದಿಸಲು ಇನ್ನೂ 5 ಲಕ್ಷ ರೂ. ನೀಡುವಂತೆ ಪತಿ ಮತ್ತು ಅತ್ತೆ-ಮಾವ ಒತ್ತಾಯಿಸುತ್ತಿದ್ದರು. ಇದೇ ಕಾರಣಕ್ಕೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಪುರಂದರ ತಾಲೂಕಿನ ನಿವಾಸಿಯಾಗಿರುವ ಮಹಿಳೆಯ ತಂದೆ ಪ್ರವೀಣ್ ರಘುನಾಥ್ ಜರಂಡೆ(51) ಅವರು ಮಗಳ ಆತ್ಮಹತ್ಯೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಮದುವೆಗೆ ಸುಮಾರು 45 ಲಕ್ಷ ರೂ. ಖರ್ಚು ಮಾಡಿದ್ದಾಗಿ ಮತ್ತು 10 ತೊಲೆ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದಾಗಿ ಉಲ್ಲೇಖಿಸಿದ್ದಾರೆ.
ಮದುವೆ ನಂತರ ಕಾರು ಖರೀದಿಗೆ ಹಣ ತರುವಂತೆ ವೈಷ್ಣವಿಗೆ ಪದೇ ಪದೇ ಒತ್ತಾಯಿಸಲಾಗುತ್ತಿತ್ತು. ಆಕೆಗೆ ಮಾನಸಿಕ ಮತ್ತು ದೈಹಿಕ ಕಿರುಕುಳವನ್ನೂ ನೀಡಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರಿನ ಆಧಾರದ ಮೇಲೆ ಪೊಲೀಸರು ಮಹಿಳೆಯ ಪತಿ, ಮಾವ ಸಂಜಯ್ ಮಹಾದೇವ್ ಗಿಸ್ರೆ (49) ಮತ್ತು ಅತ್ತೆ ರೂಪಾಲಿ ಸಂಜಯ್ ಗಿಸ್ರೆ (42) ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



