ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನದ ಬಗ್ಗೆ ಚರ್ಚೆ!
ಈ ವೇಳೆ ವ್ಯಾಪಾರ, ರಕ್ಷಣೆ, ಇಂಧನ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ಇತರ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಚರ್ಚಿಸಿರುವುದಾಗಿ ಅವರು ತಿಳಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ವ್ಯಾಪಾರ, ರಕ್ಷಣೆ ಮತ್ತು ಇಂಧನ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಟ್ರಂಪ್ ಅವರೊಂದಿಗೆ ಫಲಪ್ರದ ಮಾತುಕತೆ ನಡೆದಿರುವುದಾಗಿ ಮೋದಿ ಹೇಳಿದ್ದಾರೆ.
ಈ ವೇಳೆ ವ್ಯಾಪಾರ, ರಕ್ಷಣೆ, ಇಂಧನ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ಇತರ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಚರ್ಚಿಸಿರುವುದಾಗಿ ಅವರು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು, ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಫಲಪ್ರದ ಮಾತುಕತೆ ನಡೆಸಿದ್ದೇವೆ. ವ್ಯಾಪಾರ, ರಕ್ಷಣೆ, ಇಂಧನ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮ ದ್ವಿಪಕ್ಷೀಯ ಸಹಕಾರ ಕುರಿತು ಚರ್ಚಿಸಿದ್ದೇವೆ. ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದುವರಿಸಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ.
ಜಾಗತಿಕ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸಲು ನಡೆಯುತ್ತಿರುವ ಪ್ರಯತ್ನಗಳು ಸೇರಿದಂತೆ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.
ಜಾಗತಿಕ ಪೂರೈಕೆ ಸರಪಳಿಗಳು, ರಕ್ಷಣಾ ತಂತ್ರಜ್ಞಾನಗಳ ಜಂಟಿ ಅಭಿವೃದ್ಧಿ, ಕೃತಕ ಬುದ್ಧಿಮತ್ತೆ ಮತ್ತು ಶುದ್ಧ ಮತ್ತು ಸಾಂಪ್ರದಾಯಿಕ ಇಂಧನ ವ್ಯಾಪಾರ ಸೇರಿದಂತೆ ಕ್ಷೇತ್ರಗಳಲ್ಲಿ ಭಾರತ ಮತ್ತು ಯುಎಸ್ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತಿರುವಾಗ ಈ ಬೆಳವಣಿಗೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



