ಸಿನಿಮಾ ಸುದ್ದಿ

ನಟ ರಜನಿಕಾಂತ್ ಆರೋಗ್ಯ ಸ್ಥಿರ, ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್: ಅಪೋಲೋ ಆಸ್ಪತ್ರೆ

ರಜಿನಿಕಾಂತ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ, ಅವರನ್ನು ಸೆಪ್ಟೆಂಬರ್ 30 ರಂದು ರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಟ ರಜನಿಕಾಂತ್ ಆರೋಗ್ಯ ಸ್ಥಿರ, ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್: ಅಪೋಲೋ ಆಸ್ಪತ್ರೆ
ನಟ ರಜನಿಕಾಂತ್
Published On :

ಚೆನ್ನೈ: ದಿಢೀರ್ ಆಸ್ಪತ್ರೆಗೆ ದಾಖಲಾಗಿರುವ ತಮಿಳು ಸೂಪರ್‌ ಸ್ಟಾರ್ ರಜನಿಕಾಂತ್ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಅವರು ಎರಡು ದಿನಗಳಲ್ಲಿ ಮನೆಗೆ ತೆರಳುತ್ತಾರೆ ಎಂದು ಹಿರಿಯ ನಟ ದಾಖಲಾಗಿರುವ ಕಾರ್ಪೊರೇಟ್ ಆಸ್ಪತ್ರೆ ಮಂಗಳವಾರ ತಿಳಿಸಿದೆ.

ರಜಿನಿಕಾಂತ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ, ಅವರನ್ನು ಸೆಪ್ಟೆಂಬರ್ 30 ರಂದು ರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದ ರಜನಿಕಾಂತ್ ಅವರ ಹೃದಯದಿಂದ(ಮಹಾಪಧಮನಿಯ) ಹೊರಹೋಗುವ ಮುಖ್ಯ ರಕ್ತನಾಳದಲ್ಲಿ ಊತವಿತ್ತು. ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಲ್ಲ. ಟ್ರಾನ್ಸ್‌ಕ್ಯಾತಿಟರ್ ವಿಧಾನದಿಂದ ಚಿಕಿತ್ಸೆ ನೀಡಲಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಆಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞ ಸಾಯಿ ಸತೀಶ್ ಅವರು ಮಹಾಪಧಮನಿಯಲ್ಲಿ ಸ್ಟೆಂಟ್ ಹಾಕಿದ್ದಾರೆ. ಊತ ಸಂಪೂರ್ಣವಾಗಿ ಕಡಿಮೆ ಆಗಿದೆ. ಚಿಕಿತ್ಸೆ ಕೂಡ ಸಕ್ಸಸ್ ಆಗಿದೆ. ರಜನಿಕಾಂತ್ ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಬುಲೆಟಿನ್ ತಿಳಿಸಿದೆ.

ಸದ್ಯ ಅಪೋಲೋ ಆಸ್ಪತ್ರೆಯಲ್ಲಿರುವ ರಜನಿಕಾಂತ್​ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಎರಡು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಆಸ್ಪತ್ರೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.