ಸಿನಿಮಾ ಸುದ್ದಿ

ಜನವರಿ 26ಕ್ಕೆ ಬೆಂಗಳೂರಿಗೆ ಶಿವಣ್ಣ ವಾಪಸ್, ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಹ್ಯಾಟ್ರಿಕ್ ಹೀರೋ!

ಜನವರಿ 26 ಗಣರಾಜ್ಯೋತ್ಸವದ ದಿನ ಬೆಂಗಳೂರಿಗೆ ಬರುವುದಾಗಿ ನಟ ಶಿವರಾಜಕುಮಾರ್ ವಿಡಿಯೋ ಮೂಲಕ ಅಭಿಮಾನಿಗಳ ಜೊತೆ ಖುಷಿ ವಿಷಯ ಹಂಚಿಕೊಂಡಿದ್ದಾರೆ.

ಜನವರಿ 26ಕ್ಕೆ ಬೆಂಗಳೂರಿಗೆ ಶಿವಣ್ಣ ವಾಪಸ್, ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಹ್ಯಾಟ್ರಿಕ್ ಹೀರೋ!
Published On :

ಜನವರಿ 26 ಗಣರಾಜ್ಯೋತ್ಸವದ ದಿನ ಬೆಂಗಳೂರಿಗೆ ಬರುವುದಾಗಿ ನಟ ಶಿವರಾಜಕುಮಾರ್ ವಿಡಿಯೋ ಮೂಲಕ ಅಭಿಮಾನಿಗಳ ಜೊತೆ ಖುಷಿ ವಿಷಯ ಹಂಚಿಕೊಂಡಿದ್ದಾರೆ. ಅಲ್ಲದೆ ಅದೇ ದಿನ ಜೀ ಕನ್ನಡ ವಾಹಿನಿಯಲ್ಲಿ ಭೈರತಿ ರಣಗಲ್ ಚಿತ್ರ ಪ್ರವಾರವಾಗಲಿದೆ. ಆ ಚಿತ್ರವನ್ನು ನೋಡಿ ಎಂದು ಹೇಳಿದ್ದಾರೆ. ಕ್ಯಾನ್ಸರ್ ಸರ್ಜರಿಗೆ ಒಳಗಾಗಿದ್ದ ಖ್ಯಾತ ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ಸಿನ ಬೆನ್ನಲ್ಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಅಮೇರಿಕಾದಲ್ಲಿ ಕ್ಯಾನ್ಸರ್‌ ಚಿಕಿತ್ಸೆಗೆ ಒಳಗಾಗಿದ್ದು, ಇತ್ತೀಚೆಗೆ ಸರ್ಜರಿ ಕೂಡ ಸಕ್ಸಸ್‌ ಆಗಿತ್ತು. ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದ ಶಿವಣ್ಣ ನಾನು ಆರೋಗ್ಯವಾಗಿದ್ದೇನೆ. ಆದಷ್ಟು ಬೇಗ ನಿಮ್ಮ ಮುಂದೆ ಬರುತ್ತೇನೆ ಎಂದಿದ್ದರು. ಇದೀಗ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದು ಬೆಂಗಳೂರಿಗೆ ಬರುವ ದಿನಾಂಕವನ್ನು ತಿಳಿಸಿದ್ದಾರೆ.

ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್‌ಟಿಟ್ಯೂಟ್‌ನಲ್ಲಿ ಶಿವಣ್ಣ ಅವರಿಗೆ ಇತ್ತೀಚೆಗೆ ಸರ್ಜರಿ ನಡೆದಿತ್ತು. ಬಳಿಕ ಅವರಿಗೆ ಎರಡು ಬಾರಿ ಮೆಡಿಕಲ್‌ ಚೆಕಪ್‌ ಆಗಿತ್ತು. ಇದೀಗ ಈ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಶಿವಣ್ಣ ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.