ಕರ್ನಾಟಕ

ಬೆಂಗಳೂರಿನ ಭಾರಿ ಮಳೆ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಭಾರೀ ಅನಾಹುತ ಸೃಷ್ಟಿ ಮಾಡಿದೆ.  ತುಂಬಿ ಹರಿಯುತ್ತಿದ್ದ ರಾಜಕಾಲುವೆಯಲ್ಲಿ 24 ವರ್ಷದ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆಂದು ತಿಳಿದುಬಂದಿದೆ.

ಬೆಂಗಳೂರಿನ ಭಾರಿ ಮಳೆ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಅಪ್ಪು ನಿವಾಸಕ್ಕೆ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಅಪ್ಪು ನಿವಾಸಕ್ಕೆ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಸಿದ್ದಗಂಗಾಮಠದ ನಡೆದಾಡುವ ದೇವರು, ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ಗುರುವಾರ ರಾಹುಲ್ ಅವರು ಮಠಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು. ಬಳಿಕ ರಾತ್ರಿ ಬೆಂಗಳೂರಿಗೆ ಆಗಮಿಸಿ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಸಹ ಭೇಟಿ ನೀಡಿದರು.

ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು; ಹಲವು ಪ್ರದೇಶಗಳು ಜಲಾವೃತ, ಕೇಂದ್ರೀಯ ವಿಹಾರ್ ಅಪಾರ್ಟ್​ಮೆಂಟ್​ ನಲ್ಲಿ SDRF ಕಾರ್ಯಾಚರಣೆ

ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು; ಹಲವು ಪ್ರದೇಶಗಳು ಜಲಾವೃತ, ಕೇಂದ್ರೀಯ ವಿಹಾರ್ ಅಪಾರ್ಟ್​ಮೆಂಟ್​ ನಲ್ಲಿ SDRF ಕಾರ್ಯಾಚರಣೆ

ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್​ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು. ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್​ಮೆಂಟ್​ನ 8 ಬ್ಲಾಕ್​ಗಳಿಗೆ ನೀರು ನುಗ್ಗಿದೆ.