ಕಾಂಗ್ರೆಸ್‌ಗೆ ಸೋಲು ಗ್ಯಾರಂಟಿ: ಶೆಟ್ಟರ್
ಹಾಸನ: ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ಜನ ವಿರೋಧಿ ನೀತಿ ಹೆಚ್ಚಾಗಿದೆ. ಇದಕ್ಕೆ ಚುನಾವಣೆ ಮೂಲಕ ಉತ್ತರಿಸಲು ಪರಿಷತ್ ಹಾಗೂ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿಜಗದೀಶ ಶೆಟ್ಟರ್ ಹೇಳಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ಗ್ರಾಮಾಂತರ, ಮಂಡ್ಯ ಲೋಕಸಭೆ ಉಪ ಚುನಾವಣೆ ಮತ್ತು ಮೂರು ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಏನೇ ತಂತ್ರ, ಕುತಂತ್ರ ನಡೆಸಿದರೂ ಸೋಲು ಖಚಿತ. ಪ್ರತಿಪಕ್ಷಗಳ ನಡುವೆ ಹೊಂದಾಣಿಕೆಯಾಗಿದೆ ಹೊರತು ಆಡಳಿತ ಪಕ್ಷದ ನಡುವೆ ಅಲ್ಲ. ಜನರಿಂದ ದೂರವಾಗುತ್ತಿರುವ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಹೋರಾಟ ಮಾಡಲು ಪ್ರತಿಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸುವುದರಲ್ಲಿ ತಪ್ಪೇನಿಲ್ಲ. ಮುಂದಿನ ಚುನಾವಣೆಗಳಲ್ಲಿ ಇದೇ ಮಾದರಿಯ ಮೈತ್ರಿ ಮುಂದುವರಿಸಬೇಕೋ, ಬೇಡವೋ ಎಂಬುದನ್ನು ಈ ಚುನಾವಣೆ ಫಲಿತಾಂಶದ ಆಧಾರದ ಮೇಲೆ ನಿರ್ಧರಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

