ರಾಜಕೀಯ

ಪಾಟೀಲ್ಗೆ 'ಎಸ್ಸಾರ್' ಎಂದ ಹೈಕಮಾಂಡ್

Published On :

ಬೆಂಗಳೂರು: ವಿಧಾನಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ಇಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಠಕ್ಕೆ ಕೊನೆಗೂ ಭಂಗವುಂಟಾಗಿದ್ದು, ಡಾ.ಎಸ್.ಆರ್.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವುದಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಿದೆ. ಕಳೆದ ಕೆಲ ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟು ಸಚಿವ ಸ್ಥಾನಕ್ಕಾಗಿ ಪ್ರಬಲ ಲಾಬಿ ನಡೆಸಿದ್ದ ಪಾಟೀಲ್ ಶನಿವಾರ ರಾಜಭವನದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅಧಿಕಾರ ಗೌಪ್ಯತೆ ಹಾಗೂ ಪ್ರಮಾಣ ವಚನ ಬೋಧಿಸಲಿದ್ದು, ಸಿಎಂ ಸಿದ್ದರಾಮಯ್ಯ ಅವರ ಬಳಿ ಇರುವ ಹೆಚ್ಚುವರಿ ಖಾತೆಗಳ ಪೈಕಿ ಒಂದನ್ನು ಪಾಟೀಲರಿಗೆ ಬಿಟ್ಟುಕೊಡಲು ನಿರ್ಧರಿಸಲಾಗಿದೆ. ಆರಂಭದಿಂದಲೂ ಸಿದ್ದರಾಮಯ್ಯ ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ಇಲ್ಲ ಎಂದು ವಾದಿಸುತ್ತಾ ಬಂದಿದ್ದರು. ಇದಕ್ಕೆ ಮೂಲ ಕಾಂಗ್ರೆಸ್ ಮುಖಂಡರಿಂದ ಆಕ್ಷೇಪ ವ್ಯಕ್ತವಾಗಿತ್ತು. ಇದರ ಜತೆಗೆ ಕಾಂಗ್ರೆಸ್ ಸರ್ಕಾರ ಇದ್ದಾಗ ತಂದ ಪರಿಷತ್ ಕಲಾಪ ನಿಯಮ ತಿದ್ದುಪಡಿಯೂ ಅಡ್ಡಿಯಾಗಿತ್ತು. ಈ ತಿದ್ದುಪಡಿ ಪ್ರಕಾರ ವಿಧಾನ ಪರಿಷತ್ನಲ್ಲಿ ಸಭಾನಾಯಕರಾಗಿ ಕರ್ತವ್ಯ ನಿರ್ವಹಿಸುವವರು ಪರಿಷತ್ ಸದಸ್ಯರಾಗಿದ್ದು ಸಚಿವರಾಗಿರಬೇಕು. ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿ ಅಂಥವರ್ಯಾರು ಇರಲಿಲ್ಲ. ಹೀಗಾಗಿ ಅಧಿವೇಶನಕ್ಕೆ ಮುನ್ನ ಪರಿಷತ್ನಿಂದ ಒಬ್ಬರನ್ನು ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳುವ ಅನಿವಾರ್ಯತೆ ಇತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.