ಜೆಡಿಎಸ್ ಕಲಾಪ ಬಹಿಷ್ಕರಿಸದು
ಬೆಳಗಾವಿ ಅಧಿವೇಶನದಲ್ಲಿ ಜೆಡಿಎಸ್ ಕಲಾಪ ಬಹಿಷ್ಕರಿಸುವುದಿಲ್ಲ, ಧರಣಿ ನಡೆಸುವುದಿಲ್ಲ..

ಹುಬ್ಬಳ್ಳಿ: ಬೆಳಗಾವಿ ಅಧಿವೇಶನದಲ್ಲಿ ಜೆಡಿಎಸ್ ಕಲಾಪ ಬಹಿಷ್ಕರಿಸುವುದಿಲ್ಲ, ಧರಣಿ ನಡೆಸುವುದಿಲ್ಲ. ಕೋಟ್ಯಂತರ ರುಪಾಯಿ ಖರ್ಚು ಮಾಡಿ ನಡೆಸುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಅಭಿವೃದ್ಧಿಗೆ ಸಕಾರಾತ್ಮಕ ಚರ್ಚೆಗಳು ನಡೆಯಲಿ ಎನ್ನುವುದು ಪಕ್ಷದ ನಿಲುವು ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಾಪ ಬಹಿಷ್ಕರಿಸುವುದರಿಂದ ಏನನ್ನೂ ಸಾಧಿಸಲಾಗದು. ಸದನದಲ್ಲಿ ಈ ಭಾಗದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಬೇಕಿದೆ. ಪ್ರಮುಖವಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ಹಿನ್ನಲೆಯಲ್ಲಿ ನಂಜುಡಪ್ಪ ವರದಿಯನ್ನು ಪರಿಪೂರ್ಣವಾಗಿ ಅನುಷ್ಠಾನಕ್ಕೆ ತರುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು.
ಧರಣಿ, ಕಲಾಪ ಬಹಿಷ್ಕರಿಸಿದರೆ ಸರ್ಕಾರಕ್ಕೆ ಇದೇ ಸಬೂಬಾಗಲಿದೆ ಎಂದರು. ಕೆಪಿಎಸ್‌ಸಿ ಸಮಿತಿಯಲ್ಲಿ ಉತ್ತರ ಕರ್ನಾಟಕವರಿಗೆ ಅವಕಾಶ ನೀಡುತ್ತಿಲ್ಲ. ಕೆಪಿಎಸ್‌ಸಿ ಎಂದರೆ ಬೆಂಗಳೂರು ಎಂಬಂತಾಗಿದೆ.
ಕೆಪಿಎಸ್‌ಸಿ ಎಂದರೆ ಬೆಂಗಳೂರು ಎಂಬಂತಾಗಿದೆ. ಕೆಪಿಎಸ್‌ಸಿಯಲ್ಲಿ ಉತ್ತರ ಕರ್ನಾಟಕದವರನ್ನು ಸದಸ್ಯರನ್ನಾಗಿ ನೇಮಿಸಿಕೊಳ್ಳಬೇಕೆಂದೂ ಸದನದಲ್ಲಿ ಒತ್ತಾಯಿಸಲಾಗುವುದು ಎಂದರು.
ಹೋರಾಟಕ್ಕೆ ವೇದಿಕೆ: ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಯ ಬಗ್ಗೆ ಸರ್ಕಾರದ ಮೇಲೆ ಒತ್ತಡ ತರುವ ಜತೆಗೆ ಈ ನಿಟ್ಟಿನಲ್ಲಿ ಚರ್ಚಿಸಲು ಹೋರಾಟ ರೂಪಿಸಲು ವೇದಿಕೆ ನಿರ್ಮಿಸಬೇಕಿದೆ. ಈ ಭಾಗದಲ್ಲಿ 96 ಶಾಸಕರಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಈ ಬಗ್ಗೆ ಚಿಂತನೆ ನಡೆಸಬೇಕಿದೆ. ಪ್ರಭಾವಿ ನಾಯಕರು ಈ ವೇದಿಕೆಯ ನೇತೃತ್ವ ವಹಿಸಿಕೊಂಡರೆ ಹೋರಾಟಕ್ಕೆ ಬಲ ಬರುತ್ತದೆ ಎನ್ನುವುದು ತಮ್ಮ ಅಭಿಪ್ರಾಯ. ಇದಕ್ಕಾಗಿ ನೇತೃತ್ವವಹಿಸಿಕೊಳ್ಳಲು ತಾವು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಕರೆ ನೀಡಿದ್ದೆವು. ಆದರೆ ಇನ್ನೂ ಆಸಕ್ತಿ ತೋರಿದಂತಿಲ್ಲ. ಜನವರಿ ವರೆಗೆ ಕಾದು ತಾವೇ ಹೋರಾಟದ ನೇತೃತ್ವ ವಹಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


