ರಾಜಕೀಯ

ಹೊಸ ವರ್ಷಕ್ಕೆ ಹರ್ಷದ ಮಠ

ಪ್ರತಿಪಕ್ಷಗಳು, ಮಠಮಾನ್ಯಗಳಿಂದ ಮಾತ್ರವಲ್ಲದೇ ಸ್ವಪಕ್ಷೀಯರಿಂದಲೂ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ...

ಹೊಸ ವರ್ಷಕ್ಕೆ ಹರ್ಷದ ಮಠ
ಸಿದ್ಧರಾಮಯ್ಯ
Published On :

ಮೈಸೂರು: ಪ್ರತಿಪಕ್ಷಗಳು, ಮಠಮಾನ್ಯಗಳಿಂದ ಮಾತ್ರವಲ್ಲದೇ ಸ್ವಪಕ್ಷೀಯರಿಂದಲೂ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ತಿದ್ದುಪಡಿ ವಿಧೇಯಕ-2014 ಅನ್ನು ಜನವರಿ ಕೊನೆ ವಾರದಲ್ಲಿ ಬೆಂಗಳೂರಿನಲ್ಲಿ ಆರಂಭವಾಗಲಿರುವ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರೇ ಸ್ವತಃ ಈ ವಿಷಯ ತಿಳಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು , ಇದು ಮಠಗಳ ನಿಯಂತ್ರಣಕ್ಕೆ ತರುವ ವಿಧೇಯಕ ಎಂಬ ತಪ್ಪು ಕಲ್ಪನೆ ಉಂಟಾಗಿದೆ. ವಾಸ್ತವವಾಗಿ ಸರ್ಕಾರಕ್ಕೆ ಮಠಗಳನ್ನು ನಿಯಂತ್ರಿಸುವ ಉದ್ದೇಶವಿಲ್ಲ. 2007ರಲ್ಲಿ ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ, ಬಿಎಸ್  ಯಡಿಯೂರಪ್ಪ ಉಪ ಮುಖ್ಯಮಂತ್ರಿಯಾಗಿದ್ದಾಗ ಜೆಡಿಎಸ್ -ಬಿಜೆಪಿ ಸಮ್ಮಿಶ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಪ್ರಮಾಣ ಪತ್ರದ ಆಧಾರದ ಮೇಲೆ ಈ ವಿಧೇಯಕ ಸಿದ್ಧಪಡಿಸಲಾಗಿತ್ತು ಎಂದರು. ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಚಳಿಗಾಲದ ಅಧಿವೇಶ ನದಲ್ಲಿ ಈ ವಿಧೇಯಕ ಮಂಡನೆಯಾದ ನಂತರ ವ್ಯಕ್ತವಾದ ವಿರೋಧದ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ  ಸುದೀರ್ಘವಾಗಿ ಚರ್ಚಿಸಿ, ವಿಧೇಯಕವನ್ನು ವಾಪಸ್ ಪಡೆಯುವ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.