ಮತಾಂತರ ಕುರಿತು ಮೋದಿ ಮಾತಾಡಲಿ: ದೇವೇಗೌಡ
ದೇಶದಲ್ಲಿ ನಡೆಯುತ್ತಿರುವ ಮತಾಂತರ ಕುರಿತು ಪ್ರಧಾನಿ ನರೇಂದ್ರ ಮೋದಿಯೇ...

ಮಂಗಳೂರು: ದೇಶದಲ್ಲಿ ನಡೆಯುತ್ತಿರುವ ಮತಾಂತರ ಕುರಿತು ಪ್ರಧಾನಿ ನರೇಂದ್ರ ಮೋದಿಯೇ ಮಾತನಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಸರ್ವಧರ್ಮವನ್ನು ಸಮಭಾವದಿಂದ ಪ್ರಧಾನಿ ನೋಡಬೇಕು.
ಮತಾಂತರ ಕುರಿತು ಪ್ರಧಾನಿ ಮೌನವಹಿಸಿರುವುದು ಸರಿಯಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಫೆಬ್ರವರಿ ಅಧಿವೇಶನದ ವೇಳೆ ಜನತಾ ಪರಿವಾರ ಒಂದಾಗರಿದೆ. ಈ ಕುರಿತು ಈಗಾಗಲೇ ಪ್ರಥಮ ಸುತ್ತಿನ ಮಾತುಕತೆಯಾಗಿದೆ.
ಲೋಕಸಭೆಯಲ್ಲಿ ಈಗ 15ನೇ ಸ್ಥಾನದಲ್ಲಿದ್ದೇವೆ. ಲೋಕಸಭೆಯಲ್ಲಿ ಪಕ್ಷದ ಸಂಸದರ ಸಂಖ್ಯೆ ಕಡಿಮೆ ಇರುವುದರಿಂದ ಜನರ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದ್ದರೂ ದನಿ ಎತ್ತಲು ಅವಕಾಶ ಸಿಗುತ್ತಿಲ್ಲ. ಸಂಸದರ ಸಂಖ್ಯೆ ನೋಡಿಯೇ ಸ್ಪೀಕರ್ ನಮಗೆ ಮಾತನಾಡಲು ಅವಕಾಶ ನೀಡುತ್ತಾರೆ.
ಆದ್ದರಿಂದ ಜನತಾ ಪರಿವಾರ ಒಗ್ಗೂಡುವ ಅನಿರ್ವಾಯತೆ ಇದೆ. ಒಟ್ಟುಗೂಡಿದರೆ 15ರಿಂದ 5ನೇ ಸ್ಥಾನಕ್ಕೆ ಬರಲಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


