ಮೋದಿ ನೇತೃತ್ವದ ಸಮಿತಿಯಲ್ಲಿ ಖರ್ಗೆಗೆ ಸ್ಥಾನ
ಮೋದಿ ನೇತೃತ್ವದ ತ್ರಿಸದಸ್ಯರ ಆಯ್ಕೆ ಸಮಿತಿಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮುಖ್ಯ ಮಾಹಿತಿ ಆಯುಕ್ತರನ್ನು ಆಯ್ಕೆ ಮಾಡುವ, ತ್ರಿಸದಸ್ಯರ ಆಯ್ಕೆ ಸಮಿತಿಯಲ್ಲಿ ಲೋಕಸಭಾ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಥಾನ ಪಡೆದಿದ್ದಾರೆ.
ಪ್ರಧಾನಿ ನೇತೃತ್ವದ ಈ ಸಮಿತಿಯಲ್ಲಿ ರಕ್ಷಣಾ ಸಚಿವ ಅರುಣ್ ಜೇಟ್ಲಿ ಸಹಾ ನಾಮನಿರ್ದೇಶನಗೊಂಡಿದ್ದು, ಮಲ್ಲಿಕಾರ್ಜುನ ಖರ್ಗೆಯವರು ಮತ್ತೊಬ್ಬ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಕಾನೂನು ಸಚಿವಾಲಯದ ಸಲಹೆ ಮೇರೆಗೆ ಲೋಕಸಭಾ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಸಮಿತಿಗೆ ಸೇರ್ಪಡೆ ಮಾಡಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮಾಹಿತಿ ಹಕ್ಕು ಅಥವಾ ಮಾಹಿತಿ ಹಕ್ಕು ಕಾಯ್ದೆಯ ಅನ್ವಯ ಮುಖ್ಯ ಮಾಹಿತಿ ಆಯುಕ್ತರನ್ನು, ಪ್ರಧಾನಿಯನ್ನೊಳಗೊಂಡ ಮೂರು ಸದಸ್ಯರ ಸಮಿತಿ ಆಯ್ಕೆ ಮಾಡಬೇಕಾಗುತ್ತದೆ.
ಈ ತ್ರಿ ಸದಸ್ಯ ಸಮಿತಿಯು, ಲೋಕಸಭಾ ವಿಪಕ್ಷ ನಾಯಕ ಮತ್ತು ಪ್ರಧಾನಿಯಿಂದ ನಾಮನಿರ್ದೇಶನಗೊಂಡ ಕ್ಯಾಬಿನೆಟ್ ದರ್ಜೆಯ ಮಂತ್ರಿಯನ್ನು ಒಳಗೊಂಡಿರುತ್ತದೆ.
ಮಾಹಿತಿ ಹಕ್ಕು ಕಾಯ್ದೆಯ ಪ್ರಕಾರ, ಮುಖ್ಯ ಮಾಹಿತಿ ಆಯುಕ್ತರ ನೇಮಕದಲ್ಲಿ ಯಾವುದೇ ಅನುಮಾನಗಳಿಗೆ ಎಡೆ ಮಾಡಿಕೊಡಬಾರದು ಎಂಬ ಉದ್ದೇಶದಿಂದಾಗಿ ಲೋಕಸಭಾ ವಿರೋಧ ಪಕ್ಷದ ನಾಯಕನನ್ನು ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಮಾಹಿತಿ ಹಕ್ಕು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ.
ಇದೀಗ ಲೋಕಸಭಾ ವಿಪಕ್ಷನಾಯಕನಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದು, ತ್ರೀ ಸದಸ್ಯ ಸಮಿತಿ ರಚನೆಗೆ ಕಾಲವಕಾಶ ದೊರೆತಿದೆ ಎಂದು ನಿವೃತ ಕಮೋಡೆರ್ ಕಾರ್ಯಕರ್ತ ಲೋಕೇಶ್ ಬಾತ್ರ ಸಚಿವಾಲಯದ ಕಡತದಲ್ಲಿ ಉಲ್ಲೇಖಿಸಿದ್ದಾರೆ.
ಆದರೆ ಲೋಕಸಭೆಯಲ್ಲಿ ಅಧಿಕೃತ ಪ್ರತಿಪಕ್ಷವಿಲ್ಲದ ಕಾರಣ ಏಕೈಕ ಅತಿ ದೊಡ್ಡ ಪ್ರತಿಪಕ್ಷವಾದ ಕಾಂಗ್ರೆಸ್‌ನ ಸಂಸದೀಯ ನಾಯಕನಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

