ರಾಜಕೀಯ ಉದ್ದೇಶಕ್ಕೆ ಸ್ತ್ರೀಶಕ್ತಿ ಗುಂಪು ಬಳಕೆ ಇಲ್ಲ: ಉಮಾಶ್ರೀ
ಸ್ತ್ರೀ ಶಕ್ತಿ ಗುಂಪುಗಳನ್ನು ಯಾವುದೇ ಕಾರಣಕ್ಕೂ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದಕ್ಕೆ ಅವಕಾಶ ನೀಡುವುದಿಲ್ಲ...

ಬೆಂಗಳೂರು: ಸ್ತ್ರೀ ಶಕ್ತಿ ಗುಂಪುಗಳನ್ನು ಯಾವುದೇ ಕಾರಣಕ್ಕೂ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದಕ್ಕೆ ಅವಕಾಶ ನೀಡುವುದಿಲ್ಲ. ಇಂಥ ಆರೋಪಗಳಿಗೆ ತುತ್ತಾಗದ ರೀತಿಯಲ್ಲಿ ಕರ್ತವ್ಯ ನಿರ್ವಹಣೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಸ್ತ್ರೀ ಶಕ್ತಿ ಸಂಘಗಳ ಮೂಲ ಉದ್ದೇಶವನ್ನು ಬಲಿಕೊಡಲು ಬಿಡಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಹೇಳಿದ್ದಾರೆ.
ಅವರು ಸ್ತ್ರೀಶಕ್ತಿ ಒಕ್ಕೂಟಗಳ ಸಭೆ ನಡೆಸಿರಲಿಲ್ಲ. ಈಗ ನಾನು ನಡೆಸಿದ್ದೇನೆ. ಲೆಕ್ಕಪತ್ರ ಹೇಗೆ ಕಾಯ್ದುಕೊಳ್ಳಬೇಕು, ಸಾಲ ವಸೂಲಿಯಲ್ಲಿ ನಿಯಮಿತತೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ಬಗ್ಗೆ ಅನೇಕ ವಿಚಾರಗಳನ್ನು ತಿಳಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ 1.40 ಸ್ತ್ರೀಶಕ್ತಿ ಸಂಘಗಳಿದ್ದು, 20.17 ಲಕ್ಷ ಸದಸ್ಯರಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಪ್ರತಿ ಗುಂಪಿಗೆ ಪ್ರತಿ ವರ್ಷ ತಲಾ ರೂ.5 ಸಾವಿರದಂತೆ ರೂ.25 ಸಾವಿರ ನೀಡಲಾಗುವುದು. ಇದಕ್ಕಾಗಿ ರಾಜ್ಯದ ಬೊಕ್ಕಸಕ್ಕೆ ರೂ.62 ಕೋಟಿ ಹೊರೆ ಬೀಳಲಿದೆ. ನವೆಂಬರ್ 11 ರಿಂದ ಚೆಕ್ ವಿತರಣೆ ಕಾರ್ಯ ಆರಂಭಗೊಳ್ಳಲಿದೆ ಎಂದರು.
ಅದೇ ರೀತಿ ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡುವ ಸ್ತ್ರೀ ಶಕ್ತಿ ಸಂಘಗಳಿಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ತಲಾ ರೂ.50,000 ಸಾವಿರ, ರೂ.30,000, ರೂ.20,000 ನೀಡಲು ನಿರ್ಧರಿಸಲಾಗಿದೆ. ಭವಿಷ್ಯದಲ್ಲಿ ಸಂಘಗಳನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


