ರಾಜಕೀಯ

ನಿಗಮ-ಮಂಡಳಿ ನೇಮಕಾತಿಯಲ್ಲಿ ಶಾಸಕರು, ಸಂಸದರಿಗೆ ಅವಕಾಶವಿಲ್ಲ: ದಿಗ್ವಿಜಯ್

ನಿಗಮ-ಮಂಡಳಿ ನೇಮಕಾತಿಯಲ್ಲಿ ಶಾಸಕರು, ಸಂಸದರಿಗೆ ಅವಕಾಶವಿಲ್ಲ: ದಿಗ್ವಿಜಯ್
ದಿಗ್ವಿಜಯ್ ಸಿಂಗ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಕರ್ನಾಟಕ ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರ ನೇಮಕಾತಿಯಲ್ಲಿ ಶಾಸಕರಿಗೆ, ಸಂಸದರಿಗೆ ಅವಕಾಶವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಬುಧವಾರ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ದಿಗ್ವಿಜಯ್ ಸಿಂಗ್ ಅವರು, ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಶಾಸಕರು ಹಾಗೂ ಸಂಸದರಿಗೆ ಅವಕಾಶ ನೀಡುವುದಿಲ್ಲ. ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ಈ ಬಾರಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಲಾಗುವುದು. ಅಲ್ಲದೆ ನೇಮಕಾತಿ ವೇಳೆ ಒಬ್ಬರಿಗೆ ಒಂದು ಸ್ಥಾನ ಮಾತ್ರ ನೀಡಲಾಗುತ್ತದೆ ಎಂದರು.

ಕೆಲ ಶಾಸಕರು ಹಾಗೂ ಮಾಜಿ ಶಾಸಕರು ತಮ್ಮನ್ನು ಕಡೆಗಣಿಸಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಿಗ್ವಿಜಯ್ ಸಿಂಗ್ ನೇಮಕಾತಿಯಿಂದ ಶಾಸಕರು ಮತ್ತು ಸಂಸದರನ್ನು ದೂರವಿಡಲು ನಿರ್ಧರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಒಟ್ಟಿಗೆ ಕುಳಿತು ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಸಿದ್ಧಪಡಿಸುವಂತೆ ಹೈಕಮಾಂಡ್ ಹೇಳಿತ್ತು. ರಾಜ್ಯದಲ್ಲಿ 150 ನಿಗಮ ಮಂಡಳಿಗಳಿದ್ದರೂ ಹದಿನೈದಕ್ಕೆ ತೀವ್ರ ಪೈಪೋಟಿ ನಡೆದಿದೆ. ಪ್ರಮುಖ ನಿಗಮ ಮಂಡಗಳಿಗೆ ಯಾರನ್ನು ನೇಮಕ ಮಾಡಬೇಕೆಂಬ ವಿಷಯದಲ್ಲೂ ಇವರಿಬ್ಬರ ನಡುವೆ ಸಾಮರಸ್ಯವಿಲ್ಲ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.