ರಾಜಕೀಯ

ಸಿದ್ದು ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಜ್ಜು

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಭ್ರಷ್ಟ ಸಚಿವರ ವಿರುದ್ಧ ಸಮರ ಸಾ ರಲು ಬಿಜೆಪಿ ನಿರ್ಧರಿಸಿದೆ..

ಸಿದ್ದು ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಜ್ಜು
ಬಿ.ಎಸ್. ಯಡಿಯೂರಪ್ಪ
Published On :

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಭ್ರಷ್ಟ ಸಚಿವರ ವಿರುದ್ಧ ಸಮರ ಸಾರಲು ಬಿಜೆಪಿ ನಿರ್ಧರಿಸಿದೆ.

ನಿದ್ದೆ ಮಾಡುತ್ತಿರುವ ರಾಜ್ಯ ಸರ್ಕಾರವನ್ನು ಎಬ್ಬಿಸಲು ಬೃಹತ್ ಪ್ರತಿಭಟನೆ ಅನಿವಾರ್ಯ. ಈ ಹಿನ್ನೆಲೆಯಲ್ಲಿ ನ.20ರಂದು ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪುತ್ಥಳಿ ಎದುರು ಲೋಕಸಭೆ, ರಾಜ್ಯಸಭೆ, ವಿಧಾನ ಸಭೆ ಹಾಗೂ ವಿಧಾನಪರಿಷತ್ ಸದಸ್ಯರು 2 ಗಂಟೆಗಳ  ಕಾಲ ಧರಣಿ ಕೂರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.

ನಂತರ ಸದನ ನಡೆಯುವ ದಿನದವರೆಗೆ ನಾವ್ರು ಭ್ರಷ್ಟ ಸಚಿವರು ಭಾಗವಹಿಸುವ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಿದ್ದು, ಭೂ ಹಗರಣ, ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು ಹಾಗೂ  ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ರಾಜ್ಯಪಾಲರನ್ನು ಭೇಟಿಯಾಗಿ ಗೃಹ ಸಚಿವ ಕೆ.ಜೆ ಜಾರ್ಜ್, ವಕ್ಫ್ ಸಚಿವ ಖಮರುಲ್ ಇಸ್ಲಾಂ, ಸಹಕಾರ ಸಚಿವ ಎಚ್.ಎಸ್. ಮಹದೇವ್ ಪ್ರಸಾದ್  ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ರಾಜ್ಯ  ಸಚಿವ ದಿನೇಶ್ ಗುಂಡೂರಾವ್ ಅವರನ್ನು ವಜಾ ಮಾಡುವಂತೆ ಮನವಿ ಮಾಡಲಾಗುವುದು.

ಇದಕ್ಕೆ ದಪ್ಪ ಚರ್ಮದ ಸಚಿವರು ಬಗ್ಗುವುದಿಲ್ಲ ಎನ್ನುವುದು ಗೊತ್ತಿದೆ. ಈ ಹಿನ್ನೆಲೆಯಲ್ಲಿ ಡಿ.8ರ ವರೆಗೆ ನಾಲ್ವರು ಸಚಿವರು ಭಾಗವಹಿಸುವ ಎಲ್ಲ ಕಾರ್ಯಕ್ರಮಗಳಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ಮೇಲೆ ಕಳ್ಳತನದ ಮಾಲನ್ನು ಹಿಂತಿರುಗಿಸುವಂತೆ ಸಚಿವರ ಸಮರ್ಥನೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಗುರುವಾರ ನಡೆದ ಪತ್ರಿಕಾಗೋಷ್ಠಿ ಹೇಳಿದರು.

ಕಾಂಗ್ರೆಸ್ ಮುಕ್ತ ಕರ್ನಾಟಕ: ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಕಾಂಗ್ರೆಸ್‌ನ್ನು ಆಡಳಿತದ ಗದ್ದುಗೆಯಿಂದ ಓಡಿಸಾಗಿದೆ. ಈಗ ಕಾಂಗ್ರೆಸ್ ಅಧಿಕಾರವಿರುವ ಪ್ರಮುಖ ರಾಜ್ಯವೆಂದರೆ ಕರ್ನಾಟಕ. ಹಿಂದಿನ ಚುನಾನಣೆಯ ತಪ್ಪುಗಳಿಂದ ಬಿಜೆಪಿ ಪಾಠ ಕಲಿತಿದೆ. ಪ್ರಸ್ತುತ ಸರ್ಕಾರದ ಪ್ರತಿಯೊಂದು ತಪ್ಪನ್ನು ಜನರಿಗೆ ತಿಳಿಸುತ್ತೇವೆ. ಈ ಸರ್ಕಾರವನ್ನು ಉರುಳಿಸುವವರೆಗೂ ವಿರಮಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ತಿಳಿಸಿದರು. ಬಂಡವಾಳ ಹೂಡಿಕೆಗೆ ಸಂಬಂಧಿಸಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎನ್ನುವುದರಲ್ಲಿ ಯಾವುದೇ ಸತ್ಯವಿಲ್ಲ. ಸಿದ್ಧರಾಮಯ್ಯ ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ರಾವ್ ಆರೋಪಿಸಿದರು.

ಸುವರ್ಣಸೌಧ ಮುತ್ತಿಗೆ

ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಭ್ರಷ್ಟ ಸಚಿವರ ಪದಚ್ಯುತಿ ಆಗ್ರಹಿಸಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಅವರ ನೇತೃತ್ವದಲ್ಲಿ 50 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಇತರ ಬಿಜೆಪಿ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೂ ಮುಂಚೆ ನ.20ರಿಂದ ಮಹಿಳಾ ಮೋರ್ಚಾ  ಕಾರ್ಯಕರ್ತರು ರಾಜ್ಯದ 10 ಪ್ರಮುಖ ನಗರಗಳಲ್ಲಿ ಜೈಲ್ ಭರೋ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.