ರಾಜಕೀಯ

ಖರ್ಗೆಗೆ ಪ್ರತಿಪಕ್ಷ ನಾಯಕನ ಕುರ್ಚಿ

ಕಾಂಗ್ರೆಸ್ ಪಕ್ಷ ಲೋಕಸಭೆ ಪ್ರತಿಪಕ್ಷ ನಾಯಕ ಸ್ಥಾನದಿಂದ ವಂಚಿತವಾಗಿದ್ದರೂ, ಪಕ್ಷದ ನಾಯಕ...

ಖರ್ಗೆಗೆ ಪ್ರತಿಪಕ್ಷ ನಾಯಕನ ಕುರ್ಚಿ
ಮಲ್ಲಿಕಾರ್ಜುನ ಖರ್ಗೆ
Published On :

ನವದೆಹಲಿ: ಕಾಂಗ್ರೆಸ್ ಪಕ್ಷ ಲೋಕಸಭೆ ಪ್ರತಿಪಕ್ಷ ನಾಯಕ ಸ್ಥಾನದಿಂದ ವಂಚಿತವಾಗಿದ್ದರೂ, ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲೋಕಸಭೆಯಲ್ಲಿ ಸಾಮಾನ್ಯವಾಗಿ ಪ್ರತಿಪಕ್ಷ ನಾಯಕನಿಗೆ ನೀಡುವ ಸೀಟನ್ನೇ ನೀಡಲಾಗಿದೆ. ಅಷ್ಟೇ ಅಲ್ಲ, ಕರ್ನಾಟಕದ ಸಂಸದರಾದ ಡಿ.ವಿ. ಸದಾನಂದಗೌಡ, ಅನಂತಕುಮಾರ್, ಎಚ್.ಡಿ. ದೇವೇಗೌಡ ಅವರಿಗೂ ಮೊದಲ ಸಾಲಲ್ಲಿ ಕುಳಿತುಕೊಳ್ಳುವ ಅವಕಾಶ ಸಿಕ್ಕಿದೆ.

ಮುಂದಿನ ಸೋಮವಾರದಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಶುಕ್ರವಾರ ಲೋಕಸಭಾ ಸದಸ್ಯರಿಗೆ ಆಸನ ಹಂಚಿಕೆ ಮಾಡಲಾಗಿದೆ . ಖರ್ಗೆ ಅವರಿಗೆ ಉಪಸಭಾಪತಿಯ ಪಕ್ಕದ ಸೀಟನ್ನೇ ನೀಡಲಾಗಿದೆ. ಸಾಮಾನ್ಯವಾಗಿ ಈ ಸೀಟಿನಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ಕುಳಿತುಕೊಳ್ಳುತ್ತಾರೆ. ಅಂದರೆ, ಖರ್ಗೆ ಅವರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಎಸ್ಪಿ  ಮುಖ್ಯಸ್ಥ ಮುಲಾಯಂ ಸಿಂಗ್, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರ ಜತೆಗೇ ಮೊದಲ ಸಾಲಲ್ಲಿ ಕುಳಿತುಕೊಳ್ಳಲಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಎರಡನೇ ಸಾಲಲ್ಲಿ ಸೋನಿಯಾರ ಹಿಂದುಗಡೆ ಆಸೀನರಾಗಲಿದ್ದಾರೆ.

ಇದೇ ವೇಳೆ, ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಅವರು ಮೊದಲ ಸಾಲಿನಲ್ಲಿ ಪ್ರಧಾನಿ ಮೋದಿ ಅವರ ಪಕ್ಕದ ಸೀಟಲ್ಲಿ ಕುಳಿತುಕೊಳ್ಳಲಿದ್ದಾರೆ. ನಂತರ ಅದೇ ಸಾಲಲ್ಲಿ  ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆಸೀನರಾಗಲಿದ್ದಾರೆ. ಜತೆಗೆ ಡಿವಿಎಸ್ ಮತ್ತು ಅನಂತ್‌ಕುಮಾರ್ ಅವರೂ ಮೊದಲ ಸಾಲಲ್ಲಿ ಕುಳಿತುಕೊಳ್ಳುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.