ಕಲಬುರಗಿಯಲ್ಲಿ ಸಂಪುಟ ಸಭೆ: ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರ ಬಂಧನ
ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಚಿವ ಸಂಪುಟ ಸಭೆ...

ಕಲಬುರಗಿ: ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಚಿವ ಸಂಪುಟ ಸಭೆ ನಡೆಯುತ್ತಿರುವ ಮಿನಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂದು ಕಲಬುರಗಿಯಲ್ಲಿರುವ ಮಿನಿವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ವಿಧಾನಸೌಧದ ಹೊರಗಡೆ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


